ವಿಚಾರಣೆ ಅ.3ಕ್ಕೆ ಮುಂದೂಡಿಕೆ
ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಹಾಗೂ ಮತ್ತಿತರರ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ರಾಜ್ಯ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಸಚಿವರು ನಿರಾಳರಾಗಿದ್ದಾರೆ.
ಡಿ.ಸುಧಾಕರ್ ಅವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್‌ನ ನಿರ್ದೇಶಕರೂ ಆಗಿರುವ ಸಚಿವರ ಹಾಗೂ ಅವರ ಸಹವರ್ತಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ, ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ, ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:ಸೆವೆನ್ ಹಿಲ್ಸ್ ಡೆವಲಪರ್ಸ್ ಆ್ಯಂಡ್ ಟ್ರೇಡರ್ಸ್, ಸಚಿವ ಡಿ ಸುಧಾಕರ್, ಅವರ, ಭಾಗ್ಯಮ್ಮ ಎಂಬುವರು ತಮ್ಮ ಕುಟುಂಬದವರಿಗೆ ಮೋಸ ಮಾಡಿ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಈ ಸಂಬಂಧ ನಗರದ ಸಿವಿಲ್ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣಾ ಹಂತದಲ್ಲಿದೆ. ಹೀಗಿದ್ದರೂ, ಡಿ ಸುಧಾಕರ್ ಸೇರಿದಂತೆ ಮತ್ತಿತರರು ತಾವು ನೆಲೆಸಿರುವ ಮನೆಗಳನ್ನು ತೆರವುಗೊಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿ, ಪ್ರಶ್ನಿಸಿದಾಗ ಸುಮಾರು 35ಕ್ಕೂ ಹೆಚ್ಚು ಮಂದಿ ತಮ್ಮ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ. ಮಗಳ ಮೇಲೆ ಹಲ್ಲೆ ನಡೆಸಿ, ಜಾತಿ ಉಲ್ಲೇಖಿಸಿ ನಿಂದಿಸಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯಲಹಂಕ ನಿವಾಸಿ ಸುಬ್ಬಮ್ಮ ಎಂಬುವರು ಸೆ. 10ರಂದು ಯಲಹಂಕ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪಂಗಡ (ದೌರ್ಜನ್ಯ ತಡೆ) ಕಾಯಿದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದರು. ಇದನ್ನು ಪ್ರಶ್ನಿಸಿ ಸಚಿವ ಸುಧಾಕರ್ ಮತ್ತಿತರರು ಹೈಕೋರ್ಟ್‌ಗೆ ಎ್ಐಆರ್ ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದರು.