25.8 C
Bangalore
Monday, December 9, 2019

ಹೈಕ ಇನ್ಮುಂದೆ ಕಲ್ಯಾಣ ಕರ್ನಾಟಕ ಮಂಡಳಿ

Latest News

ಹುಣಸೂರಿನಲ್ಲಿ ಹಳ್ಳಿಹಕ್ಕಿಗೆ ಮನೆ ಗೂಡಿನ ದಾರಿ ತೋರಿದ ಎಚ್.ಪಿ.ಮಂಜುನಾಥ್

ಹುಣಸೂರು: ಹಳ್ಳಿಹಕ್ಕಿ ಎಚ್​​.ವಿಶ್ವನಾಥ್ ಕಾಂಗ್ರೆಸ್​ ಅಭ್ಯರ್ಥಿ ಎಚ್​​.ಪಿ ಮಂಜುನಾಥ್ ವಿರುದ್ಧ ಹೀನಾಯ ಸೋಲು ಕಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಎಚ್​.ಪಿ ಮಂಜುನಾಥ್, ಜಿಜೆಪಿಯ ಎಚ್​....

ಉಪ ಚುನಾವಣೆ ಗೆಲುವಿಗೆ ವಿಜಯೋತ್ಸವ – ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಿಹಿ ವಿತರಣೆ ಬಣ್ಣ ಎರಚಿ ಸಂಭ್ರಮ

ಬಳ್ಳಾರಿ: ವಿಜಯನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ 30125 ಮತಗಳ ಅಂತರದಿಂದ ಗೆಲ್ಲುತ್ತಿದ್ದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ಮತ...

ಲಸಿಕೆ ಹಾಕಿಸಿ ಕಾಯಿಲೆಗಳಿಂದ ಮಕ್ಕಳ ರಕ್ಷಿಸಿ

ನಾಯಕನಹಟ್ಟಿ: ಡಿಪಿಟಿ, ಡಿಟಿ ಲಸಿಕಾ ಅಭಿಯಾನ ಡಿ.11ರಿಂದ ಆರಂಭಗೊಳ್ಳಲಿದೆ ಎಂದು ಹಿರಿಯ ಆರೋಗ್ಯ ಮೇಲ್ವಿಚಾರಕ ಶೇಷಾದ್ರಿ ತಿಳಿಸಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ...

ಬೈ ಎಲೆಕ್ಷನ್​ ರಿಸಲ್ಟ್​ | ಜಿದ್ದಾಜಿದ್ದಿನ ಯಶ ಬಿಜೆಪಿ ಪಾಲು; ರೆಬೆಲ್​ ಶಾಸಕ ಸೋಮಶೇಖರ್​ಗೆ ಒಲಿದ ಯಶವಂತಪುರ

ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ಮತ ಎಣಿಕೆಯ ಕೊನೆಯವರೆಗೂ ಕುತೂಹಲ ಉಳಿಸಿಕೊಂಡು ರಾಜ್ಯದ ಗಮನ ಸೆಳೆದಿತ್ತು. ಕೊನೆಗೆ ಬಿಜೆಪಿಯ ಎಸ್​.ಟಿ. ಸೋಮಶೇಖರ್​ 1,44,722 ಮತ ಪಡೆದು ಜಯಶಾಲಿಯಾಗಿದ್ದಾರೆ. ಚುನಾವಣೆ ಘೋಷಣೆಯಾದಗಿನಿಂದಲೂ...

ಕೊಟ್ಟೂರಲ್ಲಿ ಕ್ಲೀನ್ ರಸ್ತೆಗೆ ಮುಂದಾದ ಪಪಂ

ಕೊಟ್ಟೂರು: ಧೂಳು ಮುಕ್ತ ಪಟ್ಟಣವನ್ನಾಗಿಸಲು ಸ್ಥಳೀಯ ಪಪಂ ನಿತ್ಯ ರಸ್ತೆ ಬದಿಯ ನುಸಿ ಮಣ್ಣನ್ನು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುತ್ತಿದೆ. ಮರಿಕೊಟ್ಟೂರೇಶ್ವರ ದೇವಸ್ಥಾನದಿಂದ...

ವಾದಿರಾಜ ವ್ಯಾಸಮುದ್ರ ಕಲಬುರಗಿ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಕೊನೆಗೂ ಕಲಬುರಗಿಯಲ್ಲಿರುವ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಬದಲಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.
ಶರಣರ, ದಾಸರ ಮತ್ತು ಸೂಫಿ-ಸಂತರ ನಾಡು ಹಾಗೂ ಸಮಾನತೆ ಹರಿಕಾರ ಬಸವಣ್ಣನವರು ನಡೆದಾಡಿದ ಈ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಮಾಡಬೇಕೆಂಬ ಜನರ ಒತ್ತಾಸೆ ಇದೀಗ ಬಹುತೇಕ ಈಡೇರಿದಂತಾಗಿದೆ.
ಹೈದರಾಬಾದ್ ನಿಜಾಮನ ಆಳ್ವಿಕೆಗೆ ಒಳಪಟ್ಟಿದ್ದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಒಳಗೊಂಡ ಪ್ರದೇಶಕ್ಕೆ ಹೈದರಾಬಾದ್ ಕರ್ನಾಟಕ ಎಂದು ಕರೆಯಲಾಗುತ್ತಿದೆ. ನಿಜಾಮನ ಕಪಿಮುಷ್ಠಿಯಿಂದ ಈ ಭಾಗ ಸ್ವಾತಂತ್ರೃ ಕಂಡು ಏಳು ದಶಕಗಳಾಗುತ್ತ ಬಂದರೂ ಹೈಕ ಹೆಸರಿನಿಂದ ಮುಕ್ತಿ ಸಿಕ್ಕಿಲ್ಲ ಎಂಬ ಅಸಮಾಧಾನ ಮಾತ್ರ ಜನತೆಯಲ್ಲಿತ್ತು.
ಕಲಬುರಗಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಹೈಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಕರೆಯಬೇಕೆಂದು ಈ ಭಾಗದ ಶಾಸಕರು ಪಕ್ಷಭೇದ ಮರೆತು ಸರ್ಕಾರದ ಮೇಲೆ ಮೊದಲಿನಿಂದಲೂ ಒತ್ತಡ ಹೇರುತ್ತಲೇ ಬಂದಿದ್ದರು. ಈ ಸಲ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತಲೇ ಕಮಲ ಪಕ್ಷದ ಶಾಸಕ ಸೇಡಂನ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಎಲ್ಲ ಶಾಸಕರ ಸಹಿ ಪಡೆದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನಾಗಿ ಮಾಡುವಂತೆ ಮನವಿಪತ್ರ ಸಲ್ಲಿಸಿದ್ದರು. ಇದಕ್ಕೆ ಸಚಿವ ಸಂಪುಟ ಸ್ಪಂದಿಸಿದೆ.
17ರಂದು ಈ ಭಾಗದಲ್ಲಿ ಆಚರಿಸುವ ಹೈದರಾಬಾದ್ ವಿಮೋಚನಾ ದಿನ ಕಾರ್ಯಕ್ರಮಕ್ಕೆ ಬರಬೇಕೆಂದು ಮುಖ್ಯಮಂತ್ರಿ ಬಿಎಸ್ವೈ ಅವರನ್ನು ಆಹ್ವಾನಿಸಿರುವ ಶಾಸಕರು, ಅಂದೇ ಬಿಎಸ್ವೈ ಸಂಪುಟದ ನಿರ್ಧಾರವನ್ನು ಮತ್ತೊಮ್ಮೆ ಘೋಷಿಸುವ ನಿರೀಕ್ಷೆ ಇದೆ.
2008ರಲ್ಲಿ ರಾಜ್ಯದಲ್ಲಿ ಮೊದಲ ಸಲ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಹೈಕ ವಿಮೋಚನಾ ದಿನ ಕಾರ್ಯಕ್ರಮಕ್ಕಾಗಿ ಕಲಬುರಗಿಗೆ ಆಗಮಿಸಿದ ವೇಳೆ ಈ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಬೇಕೆಂಬ ಹಕ್ಕೊತ್ತಾಯ ಮಂಡಿಸಲಾಗಿತ್ತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಯಡಿಯೂರಪ್ಪ, ಈ ಭಾಗದ ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಂಘಟನೆಗಳು ಪರಸ್ಪರ ಚರ್ಚಿಸಿ ಸರ್ವಾನುಮತದ ನಿರ್ಧಾರಕ್ಕೆ ಬಂದು ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವೆ ಎಂದಿದ್ದರು. ಕಾರಣಾಂತರಗಳಿಂದ ನಂತರದ ದಿನಗಳಲ್ಲಿ ಈ ವಿಷಯ ತಣ್ಣಗಾಗಿತ್ತು.
ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಈ ಹಿಂದೆ ಕಲಬುರಗಿಯಲ್ಲಿ ಸಂಘಟಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಿರಿಯ ಸಾಹಿತಿ ಗೊ.ರು. ಚೆನ್ನಬಸಪ್ಪ ಮೂಲಕ ವಿಷಯ ಪ್ರಸ್ತಾಪಿಸಿ ಇನ್ಮುಂದೆ ಎಲ್ಲರೂ ಕಲ್ಯಾಣ ಕರ್ನಾಟಕ ಎಂದೇ ಕರೆಯಬೇಕು ಎಂದು ಕರೆ ಕೊಟ್ಟಿದ್ದರು. ಹಾಲಿ ಉಪ ರಾಷ್ಟ್ರಪತಿ (ಅಂದು ಕೇಂದ್ರ ಸಚಿವ) ವೆಂಕಯ್ಯ ನಾಯ್ಡು ಸೇರಿ ಗಣ್ಯಾತಿಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

 


ಈ ಭಾಗದ ಶಾಸಕರ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಮತ್ತು ಸಂಪುಟದ ಎಲ್ಲ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಹೈಕ ಬದಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಆಗಲೇಬೇಕೆಂದು ಎಲ್ಲ ಶಾಸಕರ ಸಹಿ ಮಾಡಿಸಿ ಮನವಿಪತ್ರ ಸಲ್ಲಿಸಿದ್ದೆ. ಇದನ್ನು ಪುರಸ್ಕರಿಸುವ ಮೂಲಕ ಸರ್ಕಾರ ಅಭಿನಂದನಾರ್ಹ ಕೆಲಸ ಮಾಡಿದೆ.
| ರಾಜಕುಮಾರ ಪಾಟೀಲ್ ತೆಲ್ಕೂರ, ಶಾಸಕ ಸೇಡಂ


ಹೈಕ ಬದಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನಾಗಿ ಮಾಡಬೇಕೆಂದು ಮೊದಲಿನಿಂದಲೂ ಒತ್ತಾಯಿಸುತ್ತ ಬರಲಾಗಿದೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲೂ ಮನವಿಪತ್ರ ಸಲ್ಲಿಸಲಾಗಿತ್ತು. ಈಗಿನ ಸಕರ್ಾರ ಮಹತ್ವದ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ. ಅದರೊಂದಿಗೆ ಈ ಭಾಗದ ಅಭಿವೃದ್ಧಿಗೆ ಬಜೆಟ್ ಮೊತ್ತವನ್ನು 1,500 ಕೋಟಿಯಿಂದ 2,500 ಕೋಟಿ ರೂ.ಗೆ ಹೆಚ್ಚಿಸಿದರೆ ನಿಜವಾದ ಕಲ್ಯಾಣ ಮಾಡಿದಂತಾಗುತ್ತದೆ.
| ಪ್ರಿಯಾಂಕ್ ಖರ್ಗೆ  ಮಾಜಿ ಸಚಿವ

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...