ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಹಾಸನ: ಹೊಟ್ಟೆನೋವು ತಾಳಲಾರದೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿ, ಕುಡಿದೆಲೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಸಣ್ಣಪ್ಪ ಎಂಬುವರ ಪತ್ನಿ ಸುಶೀಲಾ (50) ಮೃತ ಮಹಿಳೆ. ಹಲವು ತಿಂಗಳುಗಳಿಂದಲೂ ಹೊಟ್ಟೆನೋವಿಂದ ಬಳಲುತ್ತಿದ್ದರು. ಚಿಕಿತ್ಸೆ ನಂತರವೂ ಸಮಸ್ಯೆ ಮುಂದುವರಿದಿತ್ತು. ಇದರಿಂದಲೇ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *