ಹೊಲಿಗೆ, ವಿಡಿಯೋಗ್ರಫಿ ತರಬೇತಿ

blank

ಚಿತ್ರದುರ್ಗ: ಕ್ರೀಡಾ ಇಲಾಖೆ ಪ. ಜಾತಿ ಅರ್ಹ ಅಭ್ಯರ್ಥಿಗಳಿಂದ ಹೊಲಿಗೆ ತರಬೇತಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರಕ್ಕೆ ಅ.31 ರೊಳಗೆ ಅರ್ಜಿ ಆಹ್ವಾನಿಸಿದೆ.
ಹೊಲಿಗೆ ತರಬೇತಿ ಶಿಬಿರ ನವೆಂಬರ್ 7 ರಿಂದ 26 ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರ ನವೆಂಬರ್ 15 ರಿಂದ 26 ರವರೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣ, ಅನುತ್ತೀರ್ಣ, ವಿಡಿಯೋಗ್ರಾಫಿ ತರಬೇತಿಗೆ ಪಿಯುಸಿ ಉತ್ತೀರ್ಣ, ಅನುತ್ತೀರ್ಣ 18-40 ವರ್ಷ ವಯೋಮಿತಿಯೊಳಗಿನ ಯುವ ಜನರು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಸಲ್ಲಿಸಬೇಕು. ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಈ ಶಿಬಿರದಲ್ಲಿ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆ ಇರುತ್ತದೆ. ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 155265/9731251411 ಅಥವಾ 08194-235635ಗೆ ಸಂಪರ್ಕಿಸಬಹುದೆಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ ತಿಳಿಸಿದ್ದಾರೆ.

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…