ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: p>ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಸಿಎಂ ಅವರ ಗಮನಕ್ಕೆ ತಂದಿಲ್ಲ. ಅವರ ಗಮನಕ್ಕೆ ತಂದು ಮುಂದಿನ ಹೆಜ್ಜೆ ಇಡಲಾಗುವುದು. ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ. ಸಹಜವಾಗಿ ಅಧಿಕಾರಿಗಳಿಗೆ ಬಡ್ತಿ ನೀಡಿದ್ದೇವೆ. ನೋ ಟ್ರಾನ್ಸ್ಫರ್..ನಥಿಂಗ್ ಎಂದರು.
ವರ್ಗಾವಣೆ ವಿಷಯದಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆಯಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕೋಟ್ಯಂತರ ರೂಪಾಯಿ ಹಣ ನೋಡಿಲ್ಲ. ಯಾರಾದರೂ ಬಳಿ ಇದ್ದರೇ ತೋರಿಸಿ ಎಂದು ಸವಾಲು ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ಶಕ್ತಿ ಕುಂದಿಸಲು ಬಿಜೆಪಿ ಕೇಂದ್ರ ನಾಯಕರು ಪ್ರಯತ್ನಿಸುತ್ತಿದ್ದಾರೆ.ಯಾವುದೇ ಕಾರಣಕ್ಕೂ ಇದು ನಡೆಯುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಬಿಜೆಪಿ ಕೇಂದ್ರ ನಾಯಕರು ಎದ್ದು ಬಿದ್ದು ಸಿದ್ದರಾಮಯ್ಯ ಅವರ ಶಕ್ತಿ ಅಡಿಸಲು ಪ್ರಯತ್ನಿಸುತ್ತಿದೆ. ವಿಧಾನ ಸಭೆ ಉಪಚುನಾವಣೆಯಲ್ಲಿ ನಾವು ಜಯಗಳಿಸುತ್ತೇವೆ ಎಂದು ಹೇಳಿದರು.