18.1 C
Bangalore
Saturday, December 7, 2019

ಹೋದ ಪುಟ್ಟ-ಬಂದ ಪುಟ್ಟ !

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಹುಬ್ಬಳ್ಳಿ: ಇತ್ತೀಚೆಗಷ್ಟೇ ನಿವೃತ್ತರಾದ ಪಾಲಿಕೆಯ ಜ್ಯೂನಿಯರ್ ಇಂಜಿನಿಯರ್ ಎಸ್.ಎನ್. ಪುಟ್ಟಣ್ಣಯ್ಯ ಅವರು ಅಷ್ಟೇ ವೇಗದಲ್ಲಿ ಮರಳಿ ಪಾಲಿಕೆ ಕೆಲಸಕ್ಕೆ ಸೇರುವ ಪ್ರಯತ್ನ ನಡೆಸಿರುವುದು ಚರ್ಚೆಗೆ ಬಂದಿದೆ.

ಅವರನ್ನು ಹೊರ ಗುತ್ತಿಗೆ ಆಧಾರದಲ್ಲಿ ಪಾಲಿಕೆ ಕೆಲಸಕ್ಕೆ ಸೇರಿಸಿಕೊಳ್ಳುವ ಪ್ರಯತ್ನದಲ್ಲಿ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಿರುವ ಶಂಕೆ ವ್ಯಕ್ತವಾಗಿದೆ. ಹಾಗೇ ನೋಡಿದರೆ ಪಾಲಿಕೆಯಲ್ಲಿ ವಿರೋಧ ಪಕ್ಷ ಎಂಬುದೇ ಇಲ್ಲ. ಎಲ್ಲರೂ ಮಿಲಾಪಿ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಶಾಸಕ ಪ್ರಸಾದ ಅಬ್ಬಯ್ಯ ಅವರನ್ನು ಹಿಡಿದುಕೊಂಡು ಪುಟ್ಟಣ್ಣಯ್ಯ ಅವರು ಮರಳಿ ಪಾಲಿಕೆ ಕಚೇರಿ ಸೇರುವ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ಮೂಲಗಳ ಪ್ರಕಾರ ಈಗಾಗಲೇ ಅವರ ನೇಮಕ ಅಂತಿಮಗೊಂಡಿದ್ದು ಸೋಮವಾರ (ಅ. 15) ಕರ್ತವ್ಯಕ್ಕೆ ಹಾಜರಾಗುತ್ತಾರೆ ಎಂದು ತಿಳಿದು ಬಂದಿದೆ. ಆದರೆ, ಪಾಲಿಕೆ ಆಯುಕ್ತರು ಈ ವಿಷಯ ತಮ್ಮ ಗಮನಕ್ಕೆ ಇಲ್ಲ ಎಂದು ಹೇಳಿದ್ದಾರೆ.

ಪುಟ್ಟಣ್ಣಯ್ಯ ಅವರು ಜುಲೈ ತಿಂಗಳಲ್ಲಿ ಪಾಲಿಕೆ ಸೇವೆಯಿಂದ ನಿವೃತ್ತರಾಗಿದ್ದರು. ಪಾಲಿಕೆಯ ನಗರ ಯೋಜನಾ ಶಾಖೆಯು ಜುಲೈ ತಿಂಗಳೊಂದರಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕಟ್ಟಡಗಳಿಗೆ ಪರವಾನಗಿ ಹಾಗೂ ಮುಕ್ತಾಯ ಪ್ರಮಾಣ ಪತ್ರ (ಸಿಸಿ) ನೀಡಿರುವುದು ಶಂಕೆಗೆ ಕಾರಣವಾಗಿತ್ತು. ಇಲ್ಲಿ ದೊಡ್ಡ ಮಟ್ಟದಲ್ಲಿ ಗೋಲಮಾಲ್ ನಡೆದಿದೆಯೆಂದು ಸಾರ್ವಜನಿಕರು ಆರೋಪಿಸಿ ತನಿಖೆಗೆ ಆಗ್ರಹಿಸಿದ್ದರು.

ಆದರೆ, ಪಾಲಿಕೆಯಲ್ಲಿ ಆಡಳಿತವಿರುವ ಬಿಜೆಪಿ ಈ ಕುರಿತು ತನಿಖೆ ನಡೆಸುವ ಪ್ರಯತ್ನವನ್ನೇ ಮಾಡಲಿಲ್ಲ. ಕಾಂಗ್ರೆಸ್ ಪಕ್ಷ ಇದನ್ನು ಗಂಭೀರವಾಗಿಯೂ ಪರಿಗಣಿಸಲಿಲ್ಲ. ಪಾಲಿಕೆಯ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂತಾದರೂ ಮೇಯರ್ ಸುಧೀರ ಸರಾಫ ಅವರು ಈ ಕುರಿತು ವಿಚಾರಿಸುತ್ತೇವೆ ಎಂದಷ್ಟೇ ಹೇಳಿದರು. ತನಿಖೆ ನಡೆಸಿ ಎಂದು ಸ್ಪಷ್ಟವಾಗಿ ಹೇಳಲೇ ಇಲ್ಲ.

ಕಟ್ಟಡ ನಿರ್ಮಾಣ ಪರವಾನಗಿ ಹಾಗೂ ಮುಕ್ತಾಯ ಪ್ರಮಾಣ ಪತ್ರ ನೀಡಿಕೆಯಿಂದ ತಿಂಗಳಿಗೆ 1 ಕೋಟಿ ರೂ. ಶುಲ್ಕ ಸಂಗ್ರಹಿಸಲು ತಿಣುಕಾಡುವ ಪಾಲಿಕೆ ಜುಲೈ ತಿಂಗಳೊಂದರಲ್ಲಿಯೇ 6,58,56,771ರೂ. ಸಂಗ್ರಹಿಸಿತ್ತು. ಈ ಅವಧಿಯಲ್ಲಿ 104 ಕಟ್ಟಡಗಳಿಗೆ ಪರವಾನಿಗೆ ಹಾಗೂ 301 ಕಟ್ಟಡಗಳಿಗೆ ಮುಕ್ತಾಯ ಪ್ರಮಾಣ ಪತ್ರ ನೀಡುವ ಮೂಲಕ ಪಾಲಿಕೆಯ ನಗರ ಯೋಜನಾ ಶಾಖೆ ಎಂದಿಗೂ ಮುರೆಯಲಾಗದ ದಾಖಲೆ ನಿರ್ವಿುಸಿದೆ.

ಜುಲೈ ತಿಂಗಳಲ್ಲಿ ನೀಡಿರುವ ಕಟ್ಟಡ ನಿರ್ಮಾಣ ಪರವಾನಗಿ ಹಾಗೂ ಸಿಸಿ ನೀಡಿದ ಪ್ರತಿಯೊಂದು ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಬಿಲ್ಡಿಂಗ್ ಬೈಲಾಗೆ ವಿರುದ್ಧವಾಗಿರುವ ಕಟ್ಟಡಗಳಿಗೆ ಪರವಾನಿಗೆ ನೀಡಿರುವ ಸಾಧ್ಯತೆಗಳಿವೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಇಂಥ ಕಟ್ಟಡಗಳು ಅಪಾಯಕಾರಿ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪಾಲಿಕೆ ಆಯುಕ್ತರು ತನಿಖೆಗೆ ಆದೇಶಿಸಬೇಕಿದೆ ಎಂದು ನಾಗರಿಕರು ಆಗ್ರಹಿಸಿದ್ದರು.

ಇಷ್ಟೆಲ್ಲ ಇದ್ದರೂ ಅವರನ್ನೇ ಗುಮಾಸ್ತ ಹುದ್ದೆಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳುವ ಪ್ರಯತ್ನಗಳು ನಡೆದಿದೆ. ಮಾಸಿಕ 8000 ರೂ. ಗೌರವಧನ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.

ಹೊರಗುತ್ತಿಗೆಯಡಿ ಗುತ್ತಿಗೆದಾರರು ಯಾರನ್ನು ಬೇಕಾದರೂ ಕೆಲಸಕ್ಕೆ ತೆಗೆದುಕೊಳ್ಳಬಹುದು. ನಿವೃತ್ತರಾದವರು ಸರಿ. ಅವರು ಮಾಡುವ ನೇಮಕಾತಿಯನ್ನು ನಾವು ಪ್ರಶ್ನಿಸಲು ಬರುವುದಿಲ್ಲ. ನಗರ ಯೋಜನಾ ಶಾಖೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ನಿರ್ದಿಷ್ಟವಾಗಿ ಯಾರನ್ನು ಕೆಲಸಕ್ಕೆ ತೆಗೆದುಕೊಂಡಿದ್ದಾರೆ ಎಂಬುದನ್ನು ಪರಿಶೀಲಿಸಿ ಹೇಳಬೇಕಾಗುತ್ತದೆ

|ಶಕೀಲ್ ಅಹ್ಮದ್, ಪಾಲಿಕೆ ಆಯುಕ್ತ

ನಾವೇನೂ ಅವರ (ಪುಟ್ಟಣ್ಣಯ್ಯ)ನ್ನು ಸೇರಿಸಿಕೊಳ್ಳುತ್ತಿಲ್ಲ. ಶಾಸಕ ಪ್ರಸಾದ ಅಬ್ಬಯ್ಯ ಅವರನ್ನು ಹಿಡಿದುಕೊಂಡು ಅವರು ಪ್ರಯತ್ನ ನಡೆಸಿದ್ದಾರೆಂದು ನಾವು ಕೇಳಿದ್ದೇವೆ.

|ಸುಧೀರ ಸರಾಫ, ಪಾಲಿಕೆ ಮೇಯರ್

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...