ಹೋರಾಟ, ಚಳವಳಿ ಹಿನ್ನೆಲೆ ಇಲ್ಲದ ರಾಜಕಾರಣಿಗಳು

Latest News

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಕೂಟ, ಮತದಾರರ ಬಗೆಯುವ ನಂಬಿಕೆ ದ್ರೋಹ: ಸುಪ್ರೀಂಗೆ ಅರ್ಜಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಅಧಿಕಾರದಾಹದ ಹಿನ್ನೆಲೆಯಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಅನೈತಿಕ ಮೈತ್ರಿ ಮಾಡಿಕೊಳ್ಳುತ್ತಿವೆ. ಇದು ಮತದಾರರಿಗೆ ಬಗೆಯುತ್ತಿರುವ...

ಉಪಚುನಾವಣೆಯಲ್ಲಿ ಜಾ.ದಳ, ಬಿಜೆಪಿಗೆ ಗೆಲುವು

ಸಕಲೇಶಪುರ: ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಮಲಾ 73...

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್...

ಗುತ್ತಲ: ಹಿಂದಿನ ಕಾಲದ ರಾಜಕಾರಣಿಗಳಿಗೂ ಇಂದಿನ ರಾಜಕಾರಣಿಗಳನ್ನು ಹೋಲಿಸಿ ನೋಡಿದರೆ ಅಯ್ಯೋ ಎನ್ನುವ ಸ್ಥಿತಿ ಉಂಟಾಗಿದೆ. ಹಿಂದಿನ ರಾಜಕಾರಣಿಗಳಿಗೆ ಹೋರಾಟ ಹಾಗೂ ಚಳವಳಿ ಹಿನ್ನೆಲೆ ಇತ್ತು. ಆದರೆ, ಇಂದಿನವರಿಗೆ ಆ ಹಿನ್ನೆಲೆ ಇಲ್ಲ ಎಂದು ಡಾ. ಚಂದ್ರಶೇಖರ ಪಾಟೀಲ ಹೇಳಿದರು.

ಸಮೀಪದ ಹೊಸರಿತ್ತಿಯ ಗಾಂಧಿ ಗ್ರಾಮೀಣ ಗುರುಕುಲದಲ್ಲಿ ಗುರುವಾರ ಜರುಗಿದ ಗುದ್ಲೆಪ್ಪ ಹಳ್ಳಿಕೇರಿಯವರ 114ನೇ ಜಯಂತ್ಯುತ್ಸವದಲ್ಲಿ ಗುದ್ಲೆಪ್ಪ ಹಳ್ಳಿಕೇರಿ ಸೇವಾ ಗೌರವ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಗುದ್ಲೆಪ್ಪನವರ ಒಂದು ಶಕ್ತಿಯ ಸಂಕೇತವಾಗಿದ್ದರು. ಅವರಿಗೆ ಒಂದು ಚಳವಳಿಯ ಹಿನ್ನೆಲೆ ಇತ್ತು. ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ಕರ್ನಾಟಕ ಏಕೀಕರಣದ ಚಳವಳಿ ಅವರನ್ನು ಮೇರು ವ್ಯಕ್ತಿಯನ್ನಾಗಿ ಮಾಡಿದ್ದವು. ಅವರು ಮೂರು ಕನುಸಗಳೆಂದರೆ ದೇಶಕ್ಕೆ ಸ್ವಾತಂತ್ರ್ಯ ಲಭಿಸಬೇಕು, ಛಿದ್ರ ಛಿದ್ರವಾಗಿದ್ದ ಕನ್ನಡ ನಾಡು ಏಕೀಕರಣವಾಗಬೇಕು ಹಾಗೂ ಬಡಮಕ್ಕಳಿಗೆ ಉಚಿತ ಹಾಗೂ ಗುಣಮಟ್ಟದ ಸ್ವಾವಲಂಬಿ ಶಿಕ್ಷಣ ನೀಡಬೇಕೆಂದಾಗಿತ್ತು. ಅದಕ್ಕಾಗಿಯೇ ಈ ಗುರುಕುಲವನ್ನು ಸ್ಥಾಪಿಸಿದರು ಎಂದರು.

ಎಲ್ಲಿ ಉತ್ತಮವಾದ ಮಣ್ಣು ಇರುತ್ತಿತ್ತೋ, ಅಲ್ಲಿ ತಮ್ಮ ಕನಸಿನ ಬೀಜ ಹಾಕುತ್ತಿದ್ದರು. ನೀವೆಲ್ಲ ಅವರ ಕನಸಿನ ಬೀಜಗಳು. ಮುಂದೆ ನಿಮ್ಮ ಗುರಿ ಏನಾಗಿರಬೇಕೆಂದರೆ ಹಳ್ಳಿಕೇರಿಯವರ ಬದುಕು, ಅವರ ವ್ಯಕ್ತಿತ್ವ, ಆದರ್ಶ ಅವರ ಕನಸು ನಿಮ್ಮದಾಗಬೇಕು. ಅಂದಾಗ ಮಾತ್ರ ಈ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ನಿಮ್ಮ ಜೀವನ ಸಾರ್ಥಕವಾಗುತ್ತದೆ ಎಂದರು.

ಹಳ್ಳಿಕೇರಿಯವರ ಹೆಸರಿನ ಪ್ರಶಸ್ತಿ ಪಡೆದಿರುವುದು ನನಗೆ ಹೆಮ್ಮೆ ಎಂದರಲ್ಲದೆ, ಏಕೀಕರಣದ ಹೋರಾಟ, ಹಾವೇರಿಯಲ್ಲಿ ಶಿಕ್ಷಣ ಪಡೆದದ್ದನ್ನು ಸ್ಮರಿಸಿದರು.

ನಿವೃತ್ತ ಪ್ರಾಧ್ಯಾಪಕ ಡಾ. ಗುರುಲಿಂಗ ಕಾಪ್ಸೆ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ದೊರೆತು ಕರ್ನಾಟಕದ ಏಕೀಕರಣವೂ ಆಯಿತು. ಇದಕ್ಕೆ ಹಳ್ಳಿಕೇರಿ ಗುದ್ಲೆಪ್ಪನವರ ತ್ಯಾಗವೂ ಕಾರಣ. ಗುದ್ಲೆಪ್ಪನವರ ಕಾರಣ ಕೊಡುಗೆ ಅಪಾರವಾಗಿದೆ. ಅವರ ಮಾರ್ಗದಲ್ಲಿಯೇ ಅವರ ಪುತ್ರರಾದ ಡಾ. ಧೀನಬಂಧು ಅವರು ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಸಾಹಿತಿ ಚಂದ್ರಶೇಖರ ಪಾಟೀಲರಿಗೆ ಪ್ರಶಸ್ತಿ ನೀಡಿದ್ದು ಶ್ಲಾಘನೀಯ. ಚಂದ್ರಶೇಖರ ಪಾಟೀಲರಿಗೆ ಇಲ್ಲಿಯವರೆಗೂ ಲಭಿಸಿರುವ ಪ್ರಶಸ್ತಿಗಿಂತ ಇಂದಿನ ಪ್ರಶಸ್ತಿ ಅತ್ಯಂತ ದೊಡ್ಡದಾದ ಪ್ರಶಸ್ತಿ. ಪ್ರಶಸ್ತಿಯನ್ನು ಮೊತ್ತದಿಂದ ಅಳೆಯಬಾರದು. ಪ್ರಶಸ್ತಿಯನ್ನು ಸತ್ವದಿಂದ ಅಳಿಯಬೇಕು ಎಂದರು.

ಗುದ್ಲೆಪ್ಪನವರು ಕಟ್ಟಿರುವ ಈ ಸಂಸ್ಥೆ ಮುಂದಿನ ಪ್ರಜೆಗಳಿಗಾಗಿ ದುಡಿಯುತ್ತಿರುವ, ದೇಶ ಕಟ್ಟುವ ಕೆಲಸಕ್ಕಾಗಿ ದುಡಿಯುತ್ತಿದೆ. ಕರ್ನಾಟಕದಲ್ಲಿಯೇ ಅತ್ಯಂತ ಅಪರೂಪವಾದ ಒಂದು ಶಿಕ್ಷಣ ಸಂಸ್ಥೆ ಇದಾಗಿದೆ. ಅನುಕರಣೀಯವಾದ ಶಾಲೆ ಇದಾಗಿದೆ. ಇಲ್ಲಿಯ ಮಕ್ಕಳು ನಾಡಿನ ಉತ್ತಮ ಪ್ರಜೆಗಳಾಗಿ ಬೆಳೆದು ನಾಡಿಗೆ ಒಳ್ಳೆಯ ಸೇವೆ ಸಲ್ಲಿಸಲಿ ಎಂದು ಹಾರೈಸಿದರು.

ಇದೇ ವೇಳೆ ಜನನಾಯಕ ಹಳ್ಳಿಕೇರಿ ಗುದ್ಲೆಪ್ಪ ಹಾಗೂ ಹಳ್ಳಕೇರಿ ಗುದ್ಲೆಪ್ಪ ಎಂಬ ಎರಡು ಪುಸ್ತಕ ಬಿಡುಗಡೆ ಮಾಡಲಾಯಿತು. ವೇನಾ ಎನರ್ಜಿ ಮತ್ತು ಜುವಿ ಇಂಡಿಯಾ ಸ್ಥಾಪಿಸಿದ 10 ಕೆ.ವಿ. ಸೌರ ವಿದ್ಯುತ್ ಘಟಕವನ್ನು ಗುರುಕುಲಕ್ಕೆ ಅರ್ಪಿಸಲಾಯಿತು. ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಡಾ. ದೀನಬಂಧು ಹಳ್ಳಿಕೇರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಡಾ.ಚಿತ್ತರಂಜನ ಕಲಕೋಟಿ, ಗೋಪಣ್ಣ ಕುಲಕರ್ಣಿ, ವೀರಣ್ಣ ಚಕ್ಕಿ, ಬಿ.ಜಿ. ಗೌರಿಮನಿ, ಸತೀಶ ಕುಲಕರ್ಣಿ,ರಾಜೇಂದ್ರ ಹಳ್ಳಿಕೇರಿ ರಮೇಶಣ್ಣ ಏಕಬೋಟೆ, ರಾಜು ಲಿಂಗಯ್ಯ, ಹರೀಶಕುಮಾರ ಪಾಟೀಲ, ಮಹೇಶ ಅರಳಿ, ಸೋಮಶೇಖರ ವಿಭೂತಿ, ಅನೀಲಕುಮಾರ ಮರೋಳ, ಶಂಬಣ್ಣ ಅರಳಿ, ಪ್ರಶಾಂತ ಮಚ್ಚಂಡಿ ಸೇರಿ ಅನೇಕರು ಉಪಸ್ಥಿತರಿದ್ದರು. ಬಿ.ಎಸ್. ಯಾವಗಲ್ ನಿರೂಪಿಸಿದರು. ಆರ್.ಎಸ್. ಪಾಟೀಲ ಸ್ವಾಗತಿಸಿದರು. ವೀರಣ್ಣ ಚಕ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್.ಎಂ. ಹಸರಡ್ಡಿ ವಂದಿಸಿದರು.

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...