More

  ಹೋರಾಟದ ಫಲದಿಂದ ಮೀಸಲಾತಿ ಹೆಚ್ಚಳ

  ಗೋಕಾಕ, ಬೆಳಗಾವಿ: ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ನಿರಂತರ ಹೋರಾಟದ ಲವಾಗಿ ರಾಜ್ಯ ಸರ್ಕಾರ ನಾಯಕ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಹೆಚ್ಚಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು.

  ನಗರದ ಮಹಾಲಕ್ಷ್ಮೀ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಪ್ರಸಕ್ತ ವರ್ಷದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಶ್ರೀಗಳ ಹೋರಾಟದ ಲವಾಗಿ ಸರ್ಕಾರ, ಎಸ್ಟಿ ಸಮುದಾಯದ ಜತೆಗೆ ಎಸ್ಸಿ ಸಮುದಾಯಕ್ಕೂ ಮೀಸಲಾತಿ ಹೆಚ್ಚಿಸಿದೆ. ಸಮುದಾಯಕ್ಕೆ ಮೀಸಲಾತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರನ್ನು ಅಭಿನಂದಿಸುತ್ತೇನೆ ಎಂದರು. ಅಧ್ಯಕ್ಷತೆ ವಹಿಸಿದ್ದ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಮೀಸಲಾತಿಗಾಗಿ ನಡೆಸಿದ ಹೋರಾಟಕ್ಕೆ ಎಲ್ಲ ಸಮುದಾಯದ ಸ್ವಾಮೀಜಿಗಳು ಹಾಗೂ ಮುಖಂಡರು ನಮಗೆ ಬೆಂಬಲಿಸಿದ್ದಾರೆ. ನಮ್ಮ ಹೋರಾಟ ಕಂಡು ಮುಖ್ಯಮಂತ್ರಿ ಅವರು ಮೀಸಲಾತಿ ಹೆಚ್ಚಿಸುವ ಭರವಸೆ ನೀಡಿದ್ದರೂ ಹೋರಾಟ ಕೈಬಿಡಲಿಲ್ಲ. ಹಾಗಾಗಿ ಸರ್ವಪಕ್ಷಗಳ ಸಭೆ ನಡೆಸಿ ಸಿಎಂ ಬೊಮ್ಮಾಯಿ ಮೀಸಲಾತಿ ಹೆಚ್ಚಿಸಿದರು ಎಂದರು. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ಜಾರಕಿಹೊಳಿ ಸಹೋದರರು ಸರ್ವ ಜನಾಂಗದವರನ್ನು ಒಗ್ಗೂಡಿಸಿ ಗೋಕಾಕ ನಗರವನ್ನು ಶಾಂತಿಯ ತೋಟವನ್ನಾಗಿಸಿದ್ದಾರೆ. ಕಾರ್ಯಕ್ರಮದಲ್ಲಿ ಎಲ್ಲ ಸಮುದಾಯಗಳ ನಾಯಕರು ಭಾಗವಹಿಸಿದ್ದು, ನಮ್ಮ ಸಮುದಾಯದ ಶಕ್ತಿಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. 2023 ೆಬ್ರುವರಿ 8 ಮತ್ತು 9ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು. ಎಲ್‌ಇಟಿ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮಾತನಾಡಿದರು.

  ರಾಜನಹಳ್ಳಿಯ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ವಿವಿಧ ಸಮುದಾಯದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಕಾರ್ಯಕ್ರಮಕ್ಕೂ ಮುಂಚೆ ನಗರದ ಚನ್ನಮ್ಮ ವತ್ತದಲ್ಲಿ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಗರದ ಚನ್ನಮ್ಮ ವತ್ತ, ವಾಲ್ಮೀಕಿ ವತ್ತ, ಸಂಗೊಳ್ಳಿ ರಾಯಣ್ಣ ವತ್ತ, ಬಸವೇಶ್ವರ ವತ್ತ ಮಾರ್ಗವಾಗಿ ಮೆರವಣಿಗೆ ಸಾಗಿತು.
  ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸ್ಥಾಯಿ ಸಮಿತಿ ಚೇರ್ಮನ್ ಸಿದ್ಧಪ್ಪ ಹುಚ್ಚರಾಯಪ್ಪಗೋಳ, ಜಿಪಂ ಮಾಜಿ ಸದಸ್ಯರಾದ ಟಿ.ಆರ್. ಕಾಗಲ, ಎಂ.ಎಲ್. ತೋಳಿನವರ, ಮಾಜಿ ಶಾಸಕ ಎಂ.ಎಲ್. ಮುತ್ತೆನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಭೀಮಗೌಡ ಪೊಲೀಸ್‌ಗೌಡರ, ಸುರೇಶ ಸನದಿ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts