ಚಾಮರಾಜನಗರ: ಶಾಲಾ ಶಿಕ್ಷಣ ಇಲಾಖೆ ಮತ್ತು ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ೆ.18 ರಂದು ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
ತಾಲೂಕಿನ ನಾಗವಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಸಂಜೆ 4.30 ಗಂಟೆಗೆ ಆಯೋಜಿಸಿರುವ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸುವರು. ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ಸಿದ್ದರಾಜು ಅಧ್ಯಕ್ಷತೆವಹಿಸುವರು. ಮುಖ್ಯ ಶಿಕ್ಷಕಿ ಎಂ.ಶಾಂತಿ ಪ್ರಾಸ್ತಾವಿಕವಾಗಿ ಮಾತನಾಡುವರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೀವ್ ಭಾಗವಹಿಸುವರು. ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ.ದಾನೇಶ್ವರಿ ಉಪನ್ಯಾಸ ನೀಡುವರು.
ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ನಾಗೇಂದ್ರ, ಗ್ರಾ.ಪಂ.ಅಧ್ಯಕ್ಷ ಗೀತಾ ಶ್ರೀನಿವಾಸ್, ಉಪಾಧ್ಯಕ್ಷ ಅಸ್ಗರ್ ಪಾಷಾ, ಪಿಡಿಓ ರವಿಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಮೇಶ್, ಪಿಎಂಶ್ರೀ ನೋಡೆಲ್ ಅಧಿಕಾರಿ ಮಹದೇವಪ್ಪ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸೋಮಣ್ಣ ಮುಖ್ಯಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.