More

    ಅಂಕಗಳ ಹಿಂದೆ ಬಿದ್ದ ಶಿಕ್ಷಣ ಕ್ಷೇತ್ರ

    ಮದ್ದೂರು: ಪ್ರಸ್ತುತ ಶಿಕ್ಷಣ ಕ್ಷೇತ್ರ ವಿದ್ಯಾರ್ಥಿಗಳು ಗಳಿಸುವ ಅಂಕಗಳ ಹಿಂದೆ ಬಿದ್ದಿದ್ದು, ಅಂಕಗಳೇ ಬೌದ್ಧಿಕ ಗುಣಮಟ್ಟ ನಿರ್ಧರಿಸುವ ಪ್ರಧಾನ ಮಾನದಂಡವಾಗಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ಬೇಸರ ವ್ಯಕ್ತಪಡಿಸಿದರು.


    ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜಿನ ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಎಚ್.ಕೆ.ವೀರಣ್ಣಗೌಡ ಮಾಧ್ಯಮ ಪ್ರಶಸ್ತಿ ಪ್ರದಾನ, ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳಿಗೆ ಆಸಕ್ತಿಯನ್ನು ಗುರುತಿಸಿ ಅದಕ್ಕೆ ಪೂರಕವಾಗಿ ಶಿಕ್ಷಣ ನೀಡುವಂತಹ ವ್ಯವಸ್ಥೆ ಜಾರಿಯಾಗಬೇಕು. ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಸಮಾಜದ ಗೌರವ ಮನ್ನಣೆಗೆ ಪಾತ್ರರಾದರೆ, ನೂರಕ್ಕೆ ನೂರು ಅಂಕ ಗಳಿಸಿದವರು ಅನಾಥರಾಗಿಯೇ ಉಳಿದಿದ್ದಾರೆ.ಪಠ್ಯ ಶಿಕ್ಷಣ ವಿದ್ಯಾರ್ಥಿಗಳಿಗೆ ಅಗತ್ಯವಿದ್ದರೂ ಜೀವನ ಶಿಕ್ಷಣ ಅದಕ್ಕಿಂತ ಮುಖ್ಯ ಎಂದು ಹೇಳಿದರು.


    ಅಭಿನಂದನೆ ಸ್ವೀಕರಿಸಿ ಮಾತನಾಡಿದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ, ಮಾನವೀಯತೆ, ಪರೋಪಕಾರ, ಪ್ರೀತಿ ಮಕ್ಕಳಲ್ಲಿ ಬೆಳೆಸಿದರೆ ಅದೊಂದು ಶ್ರೇಷ್ಠ ಕಾರ್ಯವಾಗುತ್ತದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪಾಲಕರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ತಂದೆ-ತಾಯಿಯರ ಕನಸನ್ನು ನನಸು ಮಾಡುವ ರೀತಿಯಲ್ಲಿ ಶೈಕ್ಷಣಿಕ ಬೆಳವಣಿಗೆ ಕಾಣುವಂತೆ ಸಲಹೆ ನೀಡಿದರು.


    ಹಿರಿಯ ಪತ್ರಕರ್ತ ರವಿ ಹೆಗಡೆ ಅವರು ಪತ್ರಕರ್ತ ಅಣ್ಣೂರು ಲಕ್ಷ್ಮಣ್ ಅವರಿಗೆ ಎಚ್.ಕೆ.ವೀರಣ್ಣಗೌಡ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಿದರು.


    ಎಂ.ಎಚ್.ಚನ್ನೇಗೌಡ ವಿದ್ಯಾನಿಲಯದ ಗೌರವಾಧ್ಯಕ್ಷ ಎಂ.ಸ್ವರೂಪ್‌ಚಂದ್, ಕಾರ್ಯದರ್ಶಿ ಸಿ.ಅಪೂರ್ವಚಂದ್ರ, ಖಜಾಂಚಿ ಜಿ.ಎಸ್.ಶಿವರಾಮು, ನಿರ್ದೇಶಕ ಬೋರಯ್ಯ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಡಿ.ಪಿ.ಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಎಸ್.ಪುಟ್ಟಸ್ವಾಮಿ, ಪ್ರಾಂಶುಪಾಲರಾದ ಜಿ.ಎಸ್.ಶಂಕರೇಗೌಡ, ಯು.ಎಸ್.ಶಿವಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts