More

    ಅಂಕೋಲಾದ ಸ್ವಾತಂತ್ರ್ಯ ಹೋರಾಟಗಾರ ಸೂರ್ವೆ ವೆಂಕಣ್ಣ ಬೊಮ್ಮಯ್ಯ ನಾಯಕ ವಿಧಿವಶ

    ಅಂಕೋಲಾ: ಸ್ವಾತಂತ್ರ್ಯ ಹೋರಾಟಗಾರರ ಕೊನೆಯ ಕೊಂಡಿ ಸೂರ್ವೆಯ ವೆಂಕಣ್ಣ ಬೊಮ್ಮಯ್ಯ ನಾಯಕ (101) ಅವರು ಭಾನುವಾರ ನಿಧನರಾದರು. ಅವರಿಗೆ ಪತ್ನಿ, ಮೂವರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ. ಸೋಮವಾರ ಬೆಳಗ್ಗೆ 8.30ಕ್ಕೆ ಸೂರ್ವೆಯಲ್ಲಿ ತಾಲೂಕು ಆಡಳಿತದಿಂದ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ತಹಸೀಲ್ದಾರ್ ಉದಯ ಕುಂಬಾರ, ತಾಪಂ. ಇಓ ಪಿ.ವೈ.ಸಾವಂತ, ಪಿಐ ಸಂತೋಷ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.

    ನಾಯಕರ ಪರಿಚಯ: 1921ರಲ್ಲಿ ಜನಿಸಿದ ಅವರಿಗೆ ಈಗ 101 ವರ್ಷ. ಸ್ವಾತಂತ್ರ್ಯಾ ನಂತರ ಸಹಕಾರ ಕ್ಷೇತ್ರದಲ್ಲಿ ತೊಡಗಿ ದೇಶದ ಅಭಿವೃದ್ಧಿಯಲ್ಲಿ ಗಮನ ಸೆಳೆದಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅಸಹಕಾರ ಚಳುವಳಿ, ಜಂಗಲ್ ಸತ್ಯಾಗ್ರಹ, ಹುಲ್ಲು ಬನ್ನಿ ಸತ್ಯಾಗ್ರಹ, ಕರಬಂಧಿ ಸತ್ಯಾಗ್ರಹ ಹಾಗೂ ಉಪ್ಪಿನ ಸತ್ಯಾಗ್ರಹಗಳಲ್ಲಿ ಪಾಲ್ಗೊಂಡಿದ್ದರು. ಉಳುವರೆ ಜಂಗಲ್ ಸುಡುವ ಕಾರ್ಯದಲ್ಲಿ ಭಾಗವಹಿಸಿದ್ದರು. 5-12-1942 ರಿಂದ 7-6-1943 ರವರೆಗೆ ಏಳು ತಿಂಗಳು ನಾಸಿಕ್ ಸೆಂಟ್ರಲ್ ಜೈಲಿನಲ್ಲಿ ಸ್ವಾತಂತ್ರ್ಯ ಕೈದಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದರು. ಇತ್ತೀಚೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಅವರನ್ನು ಸನ್ಮಾನಿಸಲಾಗಿತ್ತು. ನಿಧನಕ್ಕೆ ಶಾಸಕಿ ರೂಪಾಲಿ ನಾಯ್ಕ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts