More

    ಅಂಗನವಾಡಿ ಕಟ್ಟಡಕ್ಕೆ ಜಾಗ ಗುರುತಿಸಿ

    ಮಡಿಕೇರಿ: ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಜಾಗ ನೀಡಬೇಕಿದ್ದು, ಕೂಡಲೇ ಜಾಗ ಗುರುತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕಂದಾಯ ನಿರೀಕ್ಷಕರಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಂದಾಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಬೇಕಿದೆ. ಈ ಹಿನ್ನೆಲೆ ಕಟ್ಟಡ ನಿರ್ಮಾಣಕ್ಕೆ ಜಾಗ ಬೇಕಾಗಿದೆ. ಆದ್ದರಿಂದ ಕಂದಾಯ ನಿರೀಕ್ಷಕರು ಜಾಗ ಗುರುತಿಸಿ, ಆದಷ್ಟು ಬೇಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ವಹಿಸಬೇಕು ಎಂದು ಸೂಚಿಸಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅರುಂಧತಿ ಮಾತನಾಡಿ, ಜಿಲ್ಲೆಯಲ್ಲಿ 871 ಅಂಗನವಾಡಿಗಳಿದ್ದು, ಈಗಾಗಲೇ 720 ಅಂಗನವಾಡಿಗಳಿಗೆ ಸ್ವಂತ ಕಟ್ಟಡವಿದೆ. ಉಳಿದಂತೆ ಶಾಲೆಗಳಲ್ಲಿ, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಸದ್ಯ 28ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಸ್ವಂತ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾಧಿಕಾರಿ ಮಾತನಾಡಿ, ಪಶುಪಾಲನಾ ಇಲಾಖೆಯ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ನಿವೇಶನ ನೀಡಲಾಗಿದೆ. ಆದರೆ, ಆರ್‌ಟಿಸಿ ಒದಗಿಸಿರುವುದಿಲ್ಲ. ಆದ್ದರಿಂದ ಆರ್‌ಟಿಸಿಯನ್ನು ತಕ್ಷಣವೇ ಒದಗಿಸಬೇಕು. ಆದಿವಾಸಿ ಭವನ ಸೇರಿ ಗಿರಿಜನರ ಶ್ರೇಯೋಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವಂತೆ ಕಂದಾಯ ನಿರೀಕ್ಷಕರಿಗೆ ಸೂಚಿಸಿದರು.

    ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ ಮಾತನಾಡಿ, ವಿವಿಧ ಇಲಾಖೆ ವ್ಯಾಪ್ತಿಗಳಿಗೆ ಸಂಬಂಧಿಸಿದಂತೆ ನಿವೇಶನ ಒದಗಿಸಿದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ತ್ವರಿತ ಕ್ರಮಕ್ಕೆ ಸೂಚಿಸಿದರು.

    ಸಭೆಯಲ್ಲಿ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ತಹಸೀಲ್ದಾರ್ ಮಹೇಶ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ತಮ್ಮಯ್ಯ, ಅರುಂಧತಿ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಹಲವು ಮಾಹಿತಿ ನೀಡಿದರು. ಶಿರಸ್ತೇದಾರ್ ಪ್ರಕಾಶ್, ಕಂದಾಯ ನಿರೀಕ್ಷಕರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts