More

    ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಗಡುವು ; ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಆದೇಶ

    ತುಮಕೂರು: ವಿವಿಧ ಯೋಜನೆಯಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ ಮಾರ್ಚ್ ಅಂತ್ಯದೊಳಗೆ ಗುಣಮಟ್ಟದ ಜತೆ ಪೂರ್ಣವಾಗಲೇಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನವಾಗುತ್ತಿರುವ ಐಸಿಡಿಎಸ್ ಕಾರ್ಯಕ್ರಮ ಸೇರಿ ವಿವಿಧ ಯೋಜನೆ, ಕಾರ್ಯಕ್ರಮಗಳ 3ನೇ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

    ಮಕ್ಕಳ ಬಳಕೆಗೆ ಇಲಾಖೆಗೆ ಹಸ್ತಾಂತರ ಮಾಡಲು ನಿರ್ಮಾಣ ಏಜೆನ್ಸಿಗಳಾದ ನಿರ್ಮಿತಿ ಕೇಂದ್ರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕೂಡಲೇ ಕ್ರಮಕೈಗೊಳ್ಳಬೇಕು, ಆತುರದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುಣಮಟ್ಟದಲ್ಲಿ ರಾಜಿಯಾಗಬಾರದು ಎಂದರು.
    ಜಿಲ್ಲೆಯಲ್ಲಿ 176 ಅಪೌಷ್ಟಿಕ ಮಕ್ಕಳಿದ್ದು, ಇವುಗಳಲ್ಲಿ ವಿವಿಧ ಸ್ವರೂಪದ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕ ಮಟ್ಟದ ಸುಧಾರಣೆಗೆ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ ಹೆಚ್ಚಿನ ಚಿಕಿತ್ಸೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

    ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳದೇ ಇತ್ಯರ್ಥಗೊಳಿಸಬೇಕು. ಇಲ್ಲವೇ ಎಫ್‌ಐಆರ್ ದಾಖಲಿಸಬೇಕು. ಸಂರಕ್ಷಣಾಧಿಕಾರಿಗಳ ಹಂತದಲ್ಲಿಯೇ ಪ್ರಕರಣಗಳನ್ನು ಉಳಿಸಿಕೊಂಡು ನೋಟಿಸ್ ಕಳುಹಿಸಿ ಸುಮ್ಮನಾಗಬಾರದು. ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜು ಅವರಿಗೆ ತಿಳಿಸಿದರು.

    ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 105 ಪ್ರಕರಣ ದಾಖಲಾಗಿವೆ. 27 ಪ್ರಕರಣಗಳನ್ನು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ. ಉಳಿದ 78 ಪ್ರಕರಣಗಳು ನ್ಯಾಯಾಲಯ ಮತ್ತು ಸಂರಕ್ಷಣಾಧಿಕಾರಿಗಳ ಹಂತದಲ್ಲಿದ್ದು, ಈ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಸೂಚಿಸಿದರು.

    ಜಿಲ್ಲೆಯ ಅಂಗನವಾಡಿ ಕಟ್ಟಡಗಳ ನಿರ್ವಹಣೆಗೆ 1.70ಕೋಟಿ ರೂ.ಅನುದಾನವಿದ್ದು, ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಗುಣಮಟ್ಟದ ಸಾಮಾಗ್ರಿ ಗಳನ್ನು ಬಳಸಿಕೊಂಡು ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಬೇಕು. ನರೇಗಾ ಯೋಜನೆಯಡಿ ಶಿರಾ-ತುಮಕೂರು ಗ್ರಾಮಾಂತರದಲ್ಲಿ ಹೆಚ್ಚಿನ ಸಂಖ್ಯೆಯ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳು ಪ್ರಗತಿ ಹಂತದಲ್ಲಿದೆ.
    ಡಾ.ಕೆ.ರಾಕೇಶ್‌ಕುಮಾರ್ ಜಿಲ್ಲಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts