More

    ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾ ಸಮ್ಮೇಳನ 26ಕ್ಕೆ 

    ದಾವಣಗೆರೆ: ನಗರದ ಶಿವಯೋಗಿ ಮಂದಿರದಲ್ಲಿ ಆ.26ರಂದು ಮಧ್ಯಾಹ್ನ 12 ಗಂಟೆಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ 6ನೇ ಜಿಲ್ಲಾ ಸಮ್ಮೇಳನ ನಡೆಯಲಿದೆ.
    ಸಮ್ಮೇಳನದ ಮೂಲಕ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ನ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಅಂದು ಬೆಳಗ್ಗೆ 11ಕ್ಕೆ ಮೆರವಣಿಗೆ ನಡೆಯಲಿದೆ. ನಂತರ ನಡೆಯುವ ಸಮ್ಮೇಳನವನ್ನು ಸಿಪಿಐನ ರಾಜ್ಯ ಮಂಡಳಿ ಸದಸ್ಯ ಡಾ.ಸಿದ್ದನಗೌಡ ಪಾಟೀಲ್ ಉದ್ಘಾಟಿಸುವರು. ಶಾಸಕ ಕೆ.ಎಸ್.ಬಸವಂತಪ್ಪ, ಫೆಡರೇಷನ್ ಅಧ್ಯಕ್ಷ ಅಮ್ಜದ್, ರಾಜ್ಯ ಉಪಾಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಇತರರು ಪಾಲ್ಗೊಳ್ಳುವರು ಎಂದರು.
    ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾಯಂಗೊಳಿಸಿ, ವೇತನ ನಿಗದಿ ಮಾಡಬೇಕು. ಆರೋಗ್ಯವಿಮೆ, ಭವಿಷ್ಯನಿಧಿ, ಗುಜರಾತ್ ಮಾದರಿಯಲ್ಲಿ ಗ್ರಾೃಚುಟಿ ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬಬೇಕು. ರಾಜ್ಯದಲ್ಲಿ 11 ಸಾವಿರ ನಿವೃತ್ತ ಕಾರ್ಯಕರ್ತೆಯರು-ಸಹಾಯಕಿಯರಿಗೆ ಇಡುಗಂಟು ನೀಡಬೇಕು. ದಾವಣಗೆರೆ ತಾಲೂಕಿನಲ್ಲಿ 136 ಕೇಂದ್ರಗಳಿಗೆ ತಲಾ 32 ಸಾವಿರೂ.ಗಳ ಬಾಡಿಗೆ ಮೊತ್ತ ಪಾವತಿಸಬೇಕು ಎಂದು ಆಗ್ರಹಿಸಿದರು.
    ಎಸ್.ಎಸ್. ಮಲ್ಲಮ್ಮ, ವಿಶಾಲಾಕ್ಷಿ ಮೃತ್ಯುಂಜಯ, ಚನ್ನಮ್ಮ, ವಸಂತಮ್ಮ, ಸರ್ವಮ್ಮ, ಕೆ.ಸಿ. ನಿರ್ಮಲಾ, ಆವರಗೆರೆ ವಾಸು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts