

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ ಖಾಲಿಯಿರುವ 06 ಅಂಗನವಾಡಿ ಕಾರ್ಯಕರ್ತೆ ಹಾಗೂ 12 ಅಂಗನವಾಡಿ ಸಹಾಯಕಿಯರ ಖಾಲಿ ಹುದ್ದೆಗಳನ್ನು ಗೌರವಧನ ಆಧಾರಿತ ಸೇವೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿoದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೆಬ್ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಚೇರಿ ಮೈಸೂರು ಗ್ರಾಮಾಂತರ, 1ನೇ ಕ್ರಾಸ್, 2ನೇ ಹಂತ, ಕೃಷ್ಣದೇವರಾಯ ವೃತ್ತ, ವಿಜಯನಗರ, ಮೈಸೂರು ದೂ.ಸಂ:0821-2567940 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ಗ್ರಾಮಾಂತರ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.