More

    ಅಂಗವಿಕಲರನ್ನು ಗುರುತಿಸುವ ಕಾರ್ಯವಾಗಲಿ

    ಬಾಗಲಕೋಟೆ: ಜಿಲ್ಲೆಯಲ್ಲಿರುವ ಎಲ್ಲ ವಿವಿಧ ಅಂಗವಿಕಲರನ್ನು ಗುರುತಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
    ನವನಗರದ ಕಲಾಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು, ಕ್ಷೇಮಾಭಿವೃದ್ದಿ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಜನಸಂಖ್ಯೆಗೆ ಅನುಗುಣವಾಗಿ ಶೇ.೫ ರಷ್ಟು ಅಂದರೆ ಜಿಲ್ಲೆಯಲ್ಲಿ ೧ ಲಕ್ಷ ಅಂಗವಿಕಲರು ಇರಬೇಕು. ಆದರೆ ಜಿಲ್ಲೆಯಲ್ಲಿ ಕೇವಲ ೪೦ ಸಾವಿರ ಅಂಗವಿಕಲರ ಪಟ್ಟಿ ಇದೆ. ಈ ಬಗ್ಗೆ ಅಧಿಕಾರಿಗಳು, ಎಂ.ಆರ್.ಡಬ್ಲೂ, ಯು.ಆರ್.ಡಬ್ಲೂ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಽಗಳು ಗಮನಹರಿಸಬೇಕು. ಮನೆ ಮನೆಗೆ ತೆರಳಿ ಅಂಗವಿಕಲರನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅವರೆಲ್ಲರಿಗೂ ಸರ್ಕಾರದ ಯೋಜನೆಗಳು ಮುಟ್ಟಿಸುವ ಕೆಲಸವಾಗಬೇಕು ಎಂದರು.
    ವಿವಿಧ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಅಂಗವಿಕಲರಿಗೆ ಶೇ.೫ ರಷ್ಟು ಅನುದಾನ ಮೀಸಲಿದ್ದು, ಆ ಅನುದಾನ ಕೇವಲ ಒಂದು ಉದ್ದೇಶಕ್ಕೆ ಮಾತ್ರ ಖರ್ಚು ಮಾಡಲಾಗುತ್ತಿತ್ತು. ಅದನ್ನು ಗಮನಿಸಿ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಬಗೆಯ ಅಂಗವಿಕಲರ ಪಟ್ಟಿ ಮಾಡಿ ಅವಶ್ಯಕತೆ ಇರುವ ಉದ್ದೇಶಗಳಿಗೆ ಅನುದಾನ ಬಳಕೆಗೆ ಕ್ರಮವಹಿಸಲಾಗುತ್ತಿದೆ. ಇದರಿಂದ ಎಲ್ಲ ವಿಧದ ಅಂಗವಿಕಲರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
    ಪ್ರತಿಯೊಬ್ಬ ಅಂಗವಿಕಲರಲ್ಲಿ ಒಂದೊಂದು ಕೌಶಲ್ಯ ಹೊಂದಿರುತ್ತಾರೆ. ಅದಕ್ಕಾಗಿಯೇ ಅವರನ್ನು ವಿಶೇಷ ಚೇತನರೆಂದು ಕರೆಯಲಾಗುತ್ತದೆ. ಅಂಗವಿಕಲರಿಗಾಗಿ ನವನಗರದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ ಎಂದರು.
    ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿ ಸವಿತಾ ಕಾಳೆ, ಕ್ರಾಂತಿ ದಿವ್ಯಾಂಗ ಒಕ್ಕೂಟದ ಜಿಲ್ಲಾ ಅಧ್ಯಕ್ಷ ರಾಜು ತೇರದಾಳ, ಕನಕಸಾಸ ಸಂಸ್ಥೆಯ ಅಧ್ಯಕ್ಷ ಪರಶುರಾಮ ಬರೆಗೊಂಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts