More

    ಅಂಗವಿಕಲರಿಗೆ ಅನುಕಂಪಕ್ಕಿಂತ ನೆರವು ಅಗತ್ಯ

    ಶಿರಹಟ್ಟಿ: ಅಂಗವಿಕಲರ ಬಗ್ಗೆ ಅನುಕಂಪ ತೋರುವುದಕ್ಕಿಂತ ಅವರಿಗೆ ನೆರವು ನೀಡಿದರೆ ಸಮಾಜದ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

    ಪಟ್ಟಣ ಪಂಚಾಯಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ವರು ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿ ಅವರು ಮಾತನಾಡಿದರು.

    ‘ಅಂಗವಿಕಲರು ಯಾರಿಗೇನೂ ಕಮ್ಮಿಯಿಲ್ಲ ಎಂಬಂತೆ ಶಿಕ್ಷಣ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಅಭಿಮಾನದ ಸಂಗತಿ. ಹೀಗಾಗಿ ಸರ್ಕಾರ ಸ್ಥಳೀಯ ಸಂಸ್ಥೆಗಳ ಮೂಲಕ ಅವರಿಗಾಗಿ ಪ್ರತ್ಯೇಕ ಅನುದಾನ ಕಾದಿರಿಸಿ ನೆರವು ನೀಡುತ್ತಿದೆ. ಅರ್ಹ ಫಲಾನುಭವಿಗಳು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡಾಗ ಸರ್ಕಾರದ ಯೋಜನೆ ಸಾರ್ಥಕವಾಗುತ್ತದೆ’ ಎಂದರು.

    ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಮೇಟಿ, ವಿ.ವಿ. ಕಪ್ಪತ್ತನವರ, ತಿಮ್ಮರಡ್ಡಿ ಅಳವಂಡಿ, ತಾಲೂಕು ಪಂಚಾಯಿತಿ ಸದಸ್ಯ ತಿಪ್ಪಣ್ಣ ಕೊಂಚಿಗೇರಿ, ರಾಮಣ್ಣ ಡಂಬಳ, ಶಿರಹಟ್ಟಿ ಬಿಜೆಪಿ ಮಂಡಳ ಅಧ್ಯಕ್ಷ ಫಕೀರೇಶ ರಟ್ಟಿಹಳ್ಳಿ, ಪಟ್ಟಣ ಪಂಚಾಯಿತಿ ಸದಸ್ಯ ಸಂದೀಪ ಕಪ್ಪತ್ತನವರ, ನಾಗರಾಜ ಲಕ್ಕುಂಡಿ, ಪರಶುರಾಮ ಡೊಂಕಬಳ್ಳಿ, ರಾಜು ಕಪ್ಪತ್ತನವರ, ರಾಮು ಕಂಬಳಿ, ಶರೀಫ ಛಬ್ಬಿ, ಪಪಂ. ಮುಖ್ಯಾಧಿಕಾರಿ ಮಲ್ಲೇಶ ಎಂ. ಕಿರಿಯ ಇಂಜಿನಿಯರ್ ಕಾಟೇವಾಲೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts