More

    ಅಂಗವಿಕಲರು ಆತ್ಮವಿಶ್ವಾಸದಿಂದ ಸಾಧನೆ ಮಾಡಿ

    ಬೆಳಗಾವಿ: ಅಂಗವಿಕಲರು ಜೀವನದಲ್ಲಿ ಜಿಗುಪ್ಸೆ ಹೊಂದದೇ ಆತ್ಮ ವಿಶ್ವಾಸದಿಂದ ಮುನ್ನಡೆಯುಬೇಕು. ಆತ್ಮ ಸ್ಥೈರ್ಯದಿಂದ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮುರಳಿ ಮನೋಹರ ರೆಡ್ಡಿ ಧೈರ್ಯ ತುಂಬಿದರು.

    ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಂಗವಿಕಲರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಿಲ್ಲಾ ಮಟ್ಟದ ಅಂಗವಿಕಲರ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿಶೇಷ ಶಾಲೆಗಳ ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳಿಗೆ ಪಾರಿತೋಷಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ರಾಜ್ಯ/ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಅಂಗವಿಕಲರನ್ನು ಸನ್ಮಾನಿಸಲಾಯಿತು.

    ಯು.ಡಿ.ಐ.ಡಿ. ಪ್ರಗತಿ ಸಾಧಿಸಲು ಕಾರಣಕರ್ತರಾದ ಡಾ.ಚಾಂದನಿ ಜಿ. ದೇವಡಿ, ಡಾ. ವಿನಯಕುಮಾರ ರೆಡ್ಡಿ, ಶ್ರೀದೇವಿ ಆಡಿಯೋಲಾಜಿಸ್ಟ್, ತಾಲೂಕು ನೋಡಲ್ ಅಧಿಕಾರಿಗಳು ಮತ್ತು ಎಂ.ಆರ್.ಡಬ್ಲ್ಯೂ ಅವರನ್ನು ಸನ್ಮಾನಿಸಲಾಯಿತು. ವಿಶೇಷ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪ, ಡಾ. ಚಾಂದಣಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಜಿ. ದೇವಡಿ, ರಾಘವೇಂದ್ರ ಅನ್ವೇಕರ ಹಾಗೂ ಜಿಲ್ಲೆಯ ಸುಮಾರು 500 ಜನ ವಿಕಲಚೇತನರು, ವಿಶೇಷ ಶಾಲೆಗಳ ಸಿಬ್ಬಂದಿ, ನೋಡಲ್ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts