More

    ಅಂಗವಿಕಲರು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ

    ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗವಿಕಲರ ಕಲ್ಯಾಣಕ್ಕಾಗಿ ಅನೇಕ ಯೋಜನೆ ರೂಪಿಸಿದ್ದು, ಸದ್ಬಳಕೆ ಮಾಡಿಕೊಳ್ಳಿ. ಹಕ್ಕು, ಅವಕಾಶ ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸಲಹೆ ನೀಡಿದರು.

    ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಂಘ-ಸಂಸ್ಥೆಗಳ, ಗ್ರಾಮೀಣ ಪುನರ್ವಸತಿ ಯೋಜನೆಯಿಂದ ತರಾಸು ರಂಗಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

    ಅಂಗವಿಕಲರಲ್ಲೂ ಅಗಾಧವಾದ ಶಕ್ತಿ ಇದೆ. ಸಮಾಜದ ಮುಖ್ಯವಾಹಿನಿಗೆ ಬರಲು ತಮ್ಮಲ್ಲಿರುವ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಸತತ ಪ್ರಯತ್ನ, ಪರಿಶ್ರಮದೊಂದಿಗೆ ಮುನ್ನುಗ್ಗಿ ಎಂದು ತಿಳಿಸಿದರು.

    ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗವಿಕಲರಿಗೆ ಮಾಸಿಕ ನಿರ್ವಾಹಣಾ ಭತ್ಯೆ, ವಿದ್ಯಾರ್ಥಿ ವೇತನ, ಸಾಧನ ಸಲಕರಣೆ, ಆಧಾರ ಯೋಜನೆ, ವಿವಾಹ ಪ್ರೋತ್ಸಾಹಧನ, ಉನ್ನತ ಶಿಕ್ಷಣಕ್ಕೆ ಶುಲ್ಕ ಮರುಪಾವತಿ, ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳಿಗೆ ಶಿಶುಪಾಲನಾ ಭತ್ಯೆ, ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಎಸ್ಸೆಸ್ಸೆಲ್ಸಿ ನಂತರದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಬ್ರೆಲ್‌ಕಿಟ್, ಹೊಲಿಗೆಯಂತ್ರ, ಉದ್ಯೋಗಸ್ಥ ಅಂಗವಿಕಲ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯ, ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಹೀಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಸಾಧನೆಯತ್ತ ದಾಪುಗಾಲಿಡಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

    ಇದೇ ವೇಳೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ ಸನ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಅಧಿಕಾರಿಗಳಾದ ವಿಜಯಕುಮಾರ್, ಸುಧಾ, ಮಂಜುಳಾ, ಮಾರುತಿ, ಜಿಲ್ಲಾ ಅಂಗವಿಕಲರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ, ಎಂಆರ್‌ಡಬ್ಲ್ಯು, ವಿಆರ್‌ಡಬ್ಲ್ಯು, ಯುಆರ್‌ಡಬ್ಲ್ಯು ಕಾರ್ಯಕರ್ತರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts