More

    ಅಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಫೆ.2, 3ಕ್ಕೆ

    ಚಿತ್ರದುರ್ಗ: ರಾಜ್ಯದಲ್ಲೇ ಪ್ರಥಮ ಬಾರಿ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 2, 3ರಂದು ಸಾಣೇಹಳ್ಳಿಯ ಶ್ರೀಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ಶಿವಸ್ವಾಮಿ ತಿಳಿಸಿದರು.

    ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿದೆ. ಎರಡು ದಿನದ ಕಾರ್ಯಕ್ರಮಕ್ಕೆ ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ 4ಸಾವಿರ ಪ್ರತಿನಿಧಿಗಳು ಭಾಗವಹಿಸುವ ನೀರೀಕ್ಷೆ ಇದೆ ಎಂದರು.

    ಸಮ್ಮೇಳಾನಾಧ್ಯಕ್ಷರ ಜೊತೆ ಅವರು ರಚಿಸಿದ ಪುಸ್ತಕಗಳ ಮೆರವಣಿಗೆ ಕೂಡ ನಡೆಯಲಿದೆ. ಕವಿಗೋಷ್ಠಿ, ಪುಸ್ತಕ ಪ್ರಕಾಶನಗಳ ಸವಾಲು, ಮಹಿಳಾ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಮಾರೋಪ ನಡೆಯಲಿದೆ ಎಂದು ತಿಳಿಸಿದರು.

    ಕಸಾಪ ಮಾಜಿ ಅಧ್ಯಕ್ಷ ಗೊ ರು ಚನ್ನಬಸಪ್ಪ ಉದ್ಘಾಟಿಸುವರು. ರಾಜ್ಯ ಘಟಕದ ಅಧ್ಯಕ್ಷ ಡಾ.ಮಹೇಶ್ ಜೋಷಿ, ಸಚಿವ ಡಿ.ಸುಧಾಕರ್, ಶಾಸಕರಾದ ಬಿ.ಜಿ.ಗೋವಿಂದಪ್ಪ, ಜಿ.ಎಚ್.ಶ್ರೀನಿವಾಸ್, ಕೆ.ಸಿ.ವೀರೇಂದ್ರ ಪಪ್ಪಿ, ನಯನ ಮೋಟಮ್ಮ, ಟಿ.ಡಿ.ರಾಜೇಗೌಡ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಎರಡೂ ಜಿಲ್ಲೆಗಳ ಇತಿಹಾಸ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಂಗಭೂಮಿ ಪರಂಪರೆ, ಜಾನಪದ ಕಲಾ ಪ್ರಕಾರಗಳ ಪ್ರದರ್ಶನ, ಸಾಂಸ್ಕೃತಿಕ ರಾಜಕಾರಣ, ಮಾನವೀಯ ಸಮಾಜ ನಿರ್ಮಾಣದಲ್ಲಿ ವಚನ ಸಾಹಿತ್ಯ ಪುಸ್ತಕ, ಮಠಗಳ ಕೊಡುಗೆ ಕುರಿತು ಚರ್ಚೆ ನಡೆಯಲಿವೆ. ಸಮ್ಮೇಳನಾಧ್ಯಕ್ಷರ ಜೊತೆ ಬಹಿರಂಗ ಅಧಿವೇಶನದಲ್ಲಿ ಸಂವಾದ ನಡೆಯಲಿದೆ ಎಂದು ವಿವರಿಸಿದರು.

    ಇದೇ ವೇಳೆ ಚಿಕ್ಕಮಗಳೂರಿನ ಸ. ಗಿರಿಜಾ ಶಂಕರ್, ಶೃಂಗೇರಿಯ ಶೈಲಜಾ ರತ್ನಾಕರ ಹೆಗಡೆ, ಸಾಹಿತಿ ಜಿ.ಎಸ್.ಉಜ್ಜನಪ್ಪ, ನಿವೃತ್ತ ಪ್ರಾಚಾರ್ಯ ಪ್ರೊ.ಲಿಂಗಪ್ಪ ಅವರಿಗೆ ಸಾಹಿತ್ಯ ಸಿರಿ, 17 ಮಂದಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

    ಸಮಾರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರದ ಮಹಿಳಾ ವಿವಿ ವಿಶ್ರಾಂತ ಕುಲಪತಿ ಡಾ.ಸಬಿಹಾ ಭೂಮಿಗೌಡ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಸೇರಿ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

    ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಸಚಿವ ಡಿ.ಸುಧಾಕರ್, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೊಳಿಸಿದರು. ಕಸಾಪ ಅಧ್ಯಕ್ಷರಾದ ಕೆ.ಎಂ.ಶಿವಸ್ವಾಮಿ, ಸೂರಿ ಶ್ರೀನಿವಾಸ್, ಸ್ವಾಗತ ಸಮಿತಿ ಅಧ್ಯಕ್ಷ ಎ.ಸಿ.ಚಂದ್ರಣ್ಣ, ಪದಾಧಿಕಾರಿಗಳಾದ ಆರ್.ಮಲ್ಲಿಕಾರ್ಜುನಯ್ಯ, ಎನ್.ಶಿವಮೂರ್ತಿ, ವಿ.ಶ್ರೀನಿವಾಸ ಮಳಲಿ, ಕೆ.ಪಿ.ಎಂ. ಗಣೇಶಯ್ಯ, ಚೌಳೂರು ಲೋಕೇಶ, ವಿ.ಧನಂಜಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts