More

    ಅಂತಿಮ ವರ್ಷದ ಪರೀಕ್ಷೆಗೆ ದಿನಾಂಕ ನಿಗದಿ

    ಧಾರವಾಡ: ಪದವಿ ಕೋರ್ಸ್​ಗಳ ಅಂತಿಮ ಸೆಮಿಸ್ಟರ್ ಪರೀಕ್ಷೆ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯವು ಪದವಿ ಕೋರ್ಸ್​ಗಳು ಹಾಗೂ ಸ್ನಾತಕೋತ್ತರ ಅಂತಿಮ ಸೆಮಿಸ್ಟರ್​ಗಳ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದೆ.

    ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಸೆ. 11ರಿಂದ 23ರವರೆಗೆ ನಡೆಯಲಿವೆ. ಸ್ನಾತಕೋತ್ತರ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಸೆ. 21ರಿಂದ ಸೆ. 30ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಕರೊನಾ ಮಧ್ಯೆಯೇ ಪರೀಕ್ಷೆ ನಡೆಸುವ ಅನಿವಾರ್ಯತೆ ಎದುರಾಗಿದ್ದರಿಂದ ಯಾವೆಲ್ಲ ಮುಂಜಾಗ್ರತೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಬೇಕೆಂಬ ಮಾರ್ಗಸೂಚಿಗಳನ್ನು ಆಯಾ ಕಾಲೇಜುಗಳಿಗೆ ಕೆಲ ದಿನಗಳ ಹಿಂದೆಯೇ ನೀಡಿದೆ.

    ಕರ್ನಾಟಕ ವಿಶ್ವವಿದ್ಯಾಲಯ ಇಷ್ಟೆಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪರೀಕ್ಷೆಗಳ ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಕೆಲ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ನಡೆಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿವೆ. ಬಿಇಡಿ ವಿದ್ಯಾರ್ಥಿಗಳು ಅಂತಿಮ ವರ್ಷದ ಪರೀಕ್ಷೆ ಮಾತ್ರ ನಡೆಸುವಂತೆ ಆಗ್ರಹಿಸಿ ಮಂಗಳವಾರ ಕವಿವಿ ಆಡಳಿತ ಕಚೇರಿ ಎದುರು ದಿಢೀರನೆ ಪ್ರತಿಭಟನೆ ನಡೆಸಿದರು.

    ಇನ್ನೂ ಬಗೆಹರಿದಿಲ್ಲ ಸಮಸ್ಯೆ
    2 ಹಾಗೂ 4ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ಅನಿಶ್ಚಿತವಾಗಿದೆ. ಈ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮುಂದಿನ ಹಂತಕ್ಕೆ ತೇರ್ಗಡೆ (ಪ್ರಮೋಟ್) ಮಾಡುವ ವಿಚಾರ ಇನ್ನೂ ಬಗೆಹರಿದಿಲ್ಲ. ಕಳೆದ ಸೆಮಿಸ್ಟರ್​ನಲ್ಲಿ ವಿದ್ಯಾರ್ಥಿಗಳು ಪಡೆದ ಅಂಕದ ಆಧಾರದಲ್ಲಿ ಮುಂದಿನ ಸೆಮಿಸ್ಟರ್​ಗೆ ಉತ್ತೀರ್ಣಗೊಳಿಸಲು ತೀರ್ವನಿಸಿದೆ. ಗ್ರೇಡಿಂಗ್​ನಿಂದ ಉತ್ತಮ ಅಂಕ ಬರಲು ಸಾಧ್ಯವಿಲ್ಲ ಎಂಬ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಚಿಂತನೆಯೂ ನಡೆದಿತ್ತು. ಆದರೆ, ಇದಕ್ಕೆ ಕೆಲವರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ವಿಚಾರದಿಂದ ಹಿಂದೆ ಸರಿಯಲಾಗಿದೆ. ಮುಂದಿನ ವಾರದಲ್ಲಿ ಈ ಕುರಿತು ಸಮಿತಿ ಸಭೆ ನಡೆಸಿ, ಯಾವ ರೀತಿ ಪ್ರಮೋಟ್ ಮಾಡಬೇಕು ಎಂದು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

    ಅಂತಿಮ ವರ್ಷದ ಪರೀಕ್ಷೆಗಳನ್ನು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿಸಿ ನಡೆಸಲಾಗುವುದು. ಈ ಕುರಿತು ಕಾಲೇಜುಗಳಿಗೆ ಸಹ ಮಾಹಿತಿ ನೀಡಲಾಗಿದೆ. 2, 4ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಪ್ರಮೋಟ್ ಮಾಡುವ ವಿಚಾರ ಕುರಿತು ಕೆಲ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಬಿಇಡಿ ವೃತ್ತಿಪರ ಕೋರ್ಸ್ ಆಗಿರುವ ಹಿನ್ನೆಲೆಯಲ್ಲಿ ಎಲ್ಲ ಸೆಮಿಸ್ಟರ್​ಗಳ ಪರೀಕ್ಷೆ ನಡೆಸುವುದು ಅನಿವಾರ್ಯ.
    | ರವೀಂದ್ರನಾಥ ಕದಂ ಮೌಲ್ಯಮಾಪನ ಕುಲಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts