More

    ಅಂಬೇಡ್ಕರ್ ತತ್ವಗಳು ವಿಶ್ವಕ್ಕೆ ಮಾದರಿ  -ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅನಿಸಿಕೆ – ಮಹಾ ಪರಿನಿರ್ವಾಣ ದಿನಾಚರಣೆ

    ದಾವಣಗೆರೆ: ಸಂವಿಧಾನ ಕರ್ತೃ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ತತ್ವ ಸಿದ್ಧಾಂತಗಳು ಒಂದು ದೇಶಕ್ಕೆ ಸೀಮಿತವಾಗಿಲ್ಲ. ಅವು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಡಾ. ಬಿ.ಆರ್.ಅಂಬೇಡ್ಕರ್‌ರ 67ನೇ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
    ಅಂಬೇಡ್ಕರ್‌ರವರು ನೀಡಿದ ಸಂವಿಧಾನದಲ್ಲಿ ಬಸವ ತತ್ವವಿದೆ. ಕೀರ್ತನಾಕಾರರ ವಿಚಾರಧಾರೆಗಳೂ ಅಡಕವಾಗಿವೆ. ಹಾಗೆಯೇ ಪ್ರತಿಯೊಬ್ಬರಿಗೂ ಕಾನೂನಿನಲ್ಲಿ ಸಮಾನ ಅವಕಾಶ ನೀಡಲಾಗಿದೆ. ಇದರಿಂದಾಗಿ ಮಹಿಳೆಯೊಬ್ಬರು ದೇಶದ ರಾಷ್ಟ್ರಪತಿಯಾಗಲು ಸಾಧ್ಯವಾಗಿದೆ ಎಂದರು.
    ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತ ಕಂಡ ಮಹಾ ಸಾಮಾಜಿಕ ಪರಿವರ್ತಕ ಹಾಗೂ ಆರ್ಥಿಕ ತಜ್ಞ. ಅವರು ರಚಿಸಿದ ಸಂವಿಧಾನದಿಂದಾಗಿ ರಾಜಕೀಯ, ಸಾಮಾಜಿಕ ಸ್ವಾತಂತ್ರೃ ಕಾಣಲು ಸಾಧ್ಯವಾಗಿದೆ ಎಂದು ತಿಳಿಸಿದರು.
    ಚಿಕ್ಕಂದಿನಲ್ಲೇ ಶ್ರೇಣೀಕೃತ ಸಮಾಜದಲ್ಲಿ ಅನುಭವಿಸಿದ ಸಂಕಷ್ಟ, ಶೋಷಣೆ ಹಾಗೂ ಮೌಲ್ಯಗಳ ವ್ಯವಸ್ಥೆಯನ್ನು ಸಾಮಾಜಿಕವಾಗಿ ಬದಲಾಯಿಸುವ ಹಾಗೂ ಸಮಾಜದ ಕಟ್ಟಕಡೆಯ ಸಮುದಾಯವಾಗಿ ಜೀವಿಸುತ್ತಿದ್ದ ದಲಿತರಿಗೂ ಪರಿಪೂರ್ಣ ಜೀವನಾವಕಾಶ ಒದಗಿಸುವ ಇರಾದೆ ಅವರಲ್ಲಿತ್ತು. ಇದಕ್ಕಾಗಿ ಕಷ್ಟಪಟ್ಟು ಭಾರತಕ್ಕೆ ವಿಶಾಲ ಸಂವಿಧಾನ ನೀಡಿದರು ಎಂದು ಹೇಳಿದರು.
    ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ್, ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಚಂದ್ರಶೇಖರ್ ಸುಂಕದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಆಹಾರ ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ರವಿಚಂದ್ರ, ಲೋಕೋಪಯೋಗಿ ಇಲಾಖೆ ಉಪನಿರ್ದೇಶಕ ಟಾಟಾ ಶಿವಣ್ಣ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಮುಖಂಡರಾದ ಎಂ. ನೀಲಗಿರಿಯಪ್ಪ, ಎಸ್.ಮಲ್ಲಿಕಾರ್ಜುನ್, ಆವರಗೆರೆ ವಾಸು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts