More

    ಅಂಬೇಡ್ಕರ್, ಬಾಬೂಜಿ ಸಾಧಕರು

    ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್‌ರಾಂ ಅವರು ತಮ್ಮ ಬದುಕಿನಲ್ಲಿ ಸಾರ್ಥಕತೆ ಕಂಡುಕೊಂಡು ಮಹಾನ್ ಸಾಧಕರಾಗಿದ್ದರು ಎಂದು ಕುವೆಂಪು ವಿಶ್ವವಿದ್ಯಾಲಯ ಅಂಬೇಡ್ಕರ್ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಹೇಳಿದರು.
    ಅಂಬೇಡ್ಕರ್ ಹಾಗೂ ಬಾಬೂಜಿ ಅವರ ಜನ್ಮದಿನದ ಅಂಗವಾಗಿ ಜಿ.ಆರ್.ಹಳ್ಳಿ ದಾವಣಗೆರೆ ವಿವಿಧ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಇಬ್ಬರು ಮಹನೀಯರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಬಣ್ಣಿಸಿದರು.
    ಸಮಾಜದಲ್ಲಿರುವ ಜಾತಿ, ಮೌಢ್ಯ ತೊಲಗಿಸಿ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದವರು. ಅಸಮಾನತೆ, ಅವಮಾನ ಮತ್ತು ಹಸಿವುಗಳಿಂದ ತಲ್ಲಣಿಸುತ್ತಿದ್ದ ಜನರಲ್ಲಿ ಜಾಗೃತಿ ಮೂಡಿಸಿದವರು. ಅವಮಾನ, ಅಗೌರವಗಳಿಗೆ ಹೆದರದೆ ಅವುಗಳನ್ನು ಏದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಸಾರಿದ ಮಹಾಪುರುಷರು ಎಂದರು.
    ಈ ಮಹನೀಯರ ಜೀವನ ಚರಿತ್ರೆ ಅಧ್ಯಯನವೆಂದರೆ ಮನುಷ್ಯರಲ್ಲಿ ಪ್ರೀತಿ, ಕರುಣೆ, ಸಮಾನತೆ, ಸಂಬಂಧ, ಸೌಜನ್ಯ, ಉತ್ತಮ ಚಿಂತನೆ, ನುಡಿ-ನಡೆಗಳನ್ನು ಭಿತ್ತಿ ಬೆಳೆಯುವಂತಹ ಹಾಗೂ ಮನದ ಮಾಲಿನ್ಯವನ್ನು ತೊಳೆಯುವಂತಹದ್ದಾಗಿದೆ. ಮಾನವೀಯತೆಯನ್ನು ಅರಿಯುವುದಾಗಿದೆ ಎಂದು ಅಭಿಪ್ರಾಯಪಟ್ಟರು.
    ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕಾರ‌್ಯಕ್ರಮ ಉದ್ಘಾಟಿಸಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಂ.ಯು.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಕನ್ನಡ ವಿಭಾಗ ಸಂಯೋಜಕ ಡಾ.ಎಚ್.ಜಿ.ವಿಜಯಕುಮಾರ್, ಸ್ಯಶಾಸ್ತ್ರ ವಿಭಾಗದ ಸಂಯೋಜಕಿ ಬಿ.ಟಿ.ನಿವೇದಿತಾ, ವಾಣಿಜ್ಯ ಶಾಸ್ತ್ರ ವಿಭಾಗದ ಸಂಯೋಜಕ ಡಾ.ಆರ್.ಕೆ.ಸತೀಶ್, ಪ್ರಾಧ್ಯಾಪಕ ಡಾ.ಪ್ರಕಾಶ್, ಡಾ.ಭೀಮಾಶಂಕರ್ ಜೋಶಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts