More

    ಅಂಬೇಡ್ಕರ ಅವಹೇಳನಕ್ಕೆ ಖಂಡನೆ

    ಬೆಳಗಾವಿ: ಬೆಂಗಳೂರಿನ ಜಯನಗರದಲ್ಲಿರುವ ಜೈನ ಕಾಲೇಜಿನಲ್ಲಿ ನಡೆದ ಯುವ ಜನೋತ್ಸವದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿರುವವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ದಲಿತ ಸಂಘಟನೆಗಳ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

    ನಗರದ ಚನ್ನಮ್ಮವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು. ಲಾಲ್ಬಾಗ ರಸ್ತೆಯಲ್ಲಿರುವ ಜೈನ ಕಾಲೇಜಿನಲ್ಲಿ ಫೆ. 6ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಾತಿ ವ್ಯವಸ್ಥೆಯನ್ನು ಖಂಡಿಸುವ ಸಂದೇಶ ಕೊಡುವ ಭರದಲ್ಲಿ ವಿದ್ಯಾರ್ಥಿಗಳು ಯಡವಟ್ಟು ಮಾಡಿಕೊಂಡಿದ್ದಾರೆ. ಕಾಲೇಜು ಫೆಸ್ಟ್‌ನಲ್ಲಿ ಹಾಸ್ಯ ಜತೆಗೆ ದಲಿತರನ್ನು ಗೇಲಿ ಮಾಡಿದ್ದನ್ನು ಖಂಡಿಸುತ್ತೇವೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಡಾ. ಬಿ.ಆರ್. ಅಂಬೇಡ್ಕರ್ ಅಲ್ಲ. ಅವರು ‘ಬಿಯರ್ ಅಂಬೇಡ್ಕರ್’ ಎಂದು ಅವಹೇಳನ ಮಾಡಿದ್ದಾರೆ. ಸ್ಕಿಟ್‌ನಲ್ಲಿ ದಲಿತ ಯುವತಿ ಬಗ್ಗೆಯೂ ಅವಮಾನ ಮಾಡಿದ್ದು, ‘ಡೋಂಟ್ ಟಚ್ ಮಿ, ಟಚ್ ಮಿ’ ಎಂಬ ಹಾಡನ್ನು ಹಾಕಿ ಗೇಲಿ ಮಾಡಿದ್ದಾರೆ. ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂದು ವಿವಾದಾತ್ಮಕವಾಗಿ ನುಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ದಲಿತಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಘಟನೆಯ ಬಗ್ಗೆ ಮಹಾರಾಷ್ಟ್ರದಲ್ಲಿ ದಲಿತ ಸಂಘಟನೆ ಮುಖಂಡ ಅಕ್ಷಯ ಬನ್ನೊಡೆ ಎಂಬುವವರು ನಾಂದೇಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅವಹೇಳನ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು.

    ಕರ್ನಾಟಕ ವಾಲ್ಮೀಕಿ ಯುವವೇದಿಕೆ ಅಧ್ಯಕ್ಷ ವಿಜಯ ತಳವಾರ, ಕರೆಪ್ಪ ಗುಡೆನ್ನವರ, ಬಸವರಾಜ ನಾಯಕ, ಆಕಾಶ ಬೆವಿನಕಟ್ಟಿ, ದಯಾನಂದ ಪವಾರ, ಮಹಾದೇವ ತಳವಾರ, ಸಂತೋಷ ಹಲಗೌರರ, ರವಿ ಬಸ್ತವಾಡಕರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts