More

    ಅಕ್ರಮ ಎಸಗಿದವರ ವಿರುದ್ಧ ಕ್ರಮ – ಎಲ್​.ಕೆ.ಅತೀಕ್

    ಬೆಳಗಾವಿ: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕೃಷಿ ಹೊಂಡದಲ್ಲಿ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್​.ಕೆ.ಅತೀಕ್​ ಎಚ್ಚರಿಕೆ ನೀಡಿದರು.

    ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯತೆ ವಹಿಸಿ ಮಾತನಾಡಿದ ಅವರು, ಕೃಷಿಹೊಂಡ ಸೇರಿದಂತೆ ನರೇಗಾ ಯೋಜನೆಯಡಿ ಕೃಷಿ ಇಲಾಖೆಯಿಂದ ಕೈಗೊಳ್ಳಲಾಗುವ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಅಕ್ರಮ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

    ಕಾಮಗಾರಿಗಳಲ್ಲಿ ಯಾವುದೇ ರೀತಿ ಅಕ್ರಮಕ್ಕೆ ಅವಕಾಶ ಕಲ್ಪಿಸಿಕೊಡಬೇಡಿ. ಕಾಮಗಾರಿಯ ಕುರಿತು ಜಿಪಿಎಸ್​ ಆಧಾರಿತ ಫೋಟೋ ಮತ್ತಿತರ ಸೂಕ್ತ ದಾಖಲಾತಿ ಕಾಯ್ದಿರಿಸಬೇಕು ಎಂದು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಊಟದ ತೊಂದರೆ ಆಗಬಾರದು.ಪ್ರಸಕ್ತ ಸಾಲಿನ ವಸತಿ ನಿಲಯಗಳ ಅನುದಾನ ಬಳಕೆಯ ಮಾಹಿತಿ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

    ಶಾಲಾ ಮಕ್ಕಳ ಕಲಿಕಾ ಮಟ್ಟವನ್ನು ಗಮನಿಸಬೇಕು. ಶಾಲಾ ಕಟ್ಟಡ, ಕೊಠಡಿಗಳ ನಿರ್ಮಾಣ, ದುರಸ್ತಿಗೆ ಮಾತ್ರ ಗಮನಕೊಡದೇ ಜಿಲ್ಲೆಯ ಪ್ರತಿ ಭಾಗದ ಶಾಲೆಗಳಿಗೆ ನಿರಂತರವಾಗಿ ಭೇಟಿ ನೀಡಿ, ಶಿಕರಿಗೆ ತರಬೇತಿ ನೀಡಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಣ ಸಿಗುವಂತೆ ಶಿಣ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದರು. ಅತಿವೃಷ್ಟಿಯಿಂದ ರಸ್ತೆಗಳು ಸಂಪೂರ್ಣ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿದ್ದರೆ ಅಂತಹ ರಸ್ತೆಗಳ ದುರಸ್ತಿಗಾಗಿ ಸರ್ಕಾರವು ಪಂಚಾಯತ್​ ರಾಜ್​ ಇಲಾಖೆಗೆ 300 ಕೋಟಿ ರೂ. ಅನುದಾನ ಒದಗಿಸಿದೆ.

    ಜಿಲ್ಲೆಯಲ್ಲಿ ಈ ರೀತಿ ಹಾನಿಯಾಗಿರುವ ರಸ್ತೆಗಳ ದುರಸ್ತಿಗೆ ಅನುದಾನ ನೀಡಲಾಗುವುದು. ರಸ್ತೆಹಾನಿಯ ಸಮೀೆ ಕೈಗೊಂಡು ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಕೂಡಲೇ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ತಿಳಿಸಿದರು.
    ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಗ್ರಾಮ ಪಂಚಾಯತಿ ಮಟ್ಟದಲ್ಲಿ ನತ್ಯಾಜ್ಯ ವಿಲೇವಾರಿ ಟಕ ನಿರ್ಮಿಸಲು ಅಗತ್ಯವಿರುವ ಜಮೀನು ನೀಡಲಾಗುವುದು. ಸರಕಾರಿ ಜಮೀನು ಇರುವ ಕಡೆ ತಣವೇ ಜಮೀನು ಮಂಜೂರು ಮಾಡಲಾಗುವುದು. ಸ್ಮಶಾನಭೂಮಿ ಸೇರಿದಂತೆ ಯಾವುದೇ ಬಗೆಯ ಜಮೀನು ಖರೀದಿಗೆ ಸಂಬಂಧಿಸಿದಂತೆ ನಿರಂತರವಾಗಿ ಸಭೆ ನಡೆಸಲಾಗುತ್ತಿದೆ ಎಂದರು.

    ಜಿಲ್ಲೆಯಲ್ಲಿ ಆಗಸ್ಟ್​ನಲ್ಲಿ ಇದುವರೆಗೆ ಶೇ.39 ಹೆಚ್ಚುವರಿ ಮಳೆಯಾಗಿದೆ. ಜಂಟಿ ಸಮೀೆಯಲ್ಲಿ ಒಟ್ಟಾರೆ 27,341 ಹೆಕ್ಟೇರ್​ ಬೆಳೆಹಾನಿ ಕಂಡುಬಂದಿದೆ. ಪರಿಹಾರ ಪೋರ್ಟಲ್​ನಲ್ಲಿ ಹಾನಿ ಕುರಿತು ಮಾಹಿತಿ ಭರ್ತಿ ಮಾಡಬೇಕು. 125 ಹೆಕ್ಟೇರ್​ ತೋಟಗಾರಿಕೆ ಬೆಳೆಹಾನಿಯಾಗಿದ್ದು, ಅದನ್ನು ಕೂಡ ನಮೂದಿಸಬೇಕು ಎಂದು ತಿಳಿಸಿದರು.

    ಜಿಪಂ ಸಿಇಒ ದರ್ಶನ್​ ಎಚ್​.ವಿ. ಮಾತನಾಡಿ, ನರೇಗಾ ಯೋಜನೆಯಡಿ ಕೃಷಿ ಹಾಗೂ ತೋಟಗಾರಿಕೆ ಬೆಳೆ ವಿಸ್ತರಣೆಗೆ ಆದ್ಯತೆ ನೀಡಲಾಗುತ್ತಿದೆ. ಕಾಮಗಾರಿಗಳಲ್ಲಿ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗಂಟಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ನಗರಾಭಿವೃದ್ದಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಡಾ. ಈಶ್ವರ ಉಳ್ಳಾಗಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts