More

    ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ

    ಮಂಡ್ಯ: ಮದ್ದೂರು ತಾಲೂಕಿನ ಚಂದಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಗುರುವಾರ ಗಣಿಗಾರಿಕೆ ನಡೆಯುತ್ತಿರುವ ಸ್ಥಳದಲ್ಲಿ ಪ್ರತಿಭಟನೆ ಮಾಡಿದರು.
    ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರಿಂದ ಹಲವು ರೀತಿಯಲ್ಲಿ ಗ್ರಾಮಸ್ಥರಿಗೆ ತೊಂದೆಯಾಗುತ್ತಿರುವ ಬಗ್ಗೆ ಭೂ ಗಣಿ ಮತ್ತು ವಿಜ್ಞಾನ ಇಲಾಖೆ, ತಾಲೂಕು ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ. ಆದರೂ ಯಾವುದೆ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಖಾಸಗಿ ಕಂಪನಿಯೊಂದು ಬೆಂಗಳೂರು ಮೈಸೂರು ಹೆದ್ದಾರಿಗೆ ಜಲ್ಲಿ, ಬೋಡ್ರಸ್ ಸೇರಿದಂತೆ ಇತರೆ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದು, ಕಾನೂನು ಉಲ್ಲಂಘನೆ ಮಾಡಿ ಭಾರಿ ಪ್ರಮಾಣ ಸ್ಪೋಟಕ ವಸ್ತುಗಳನ್ನು ಸಿಡಿಸುತ್ತಿರುವುದರಿಂದ ಹಲವಾರು ರೀತಿಯಲ್ಲಿ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಉಪಾಧ್ಕಕ್ಷ ಯರಗನಹಳ್ಳಿ ಮಹಲಿಂಗು, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts