More

    ಅಕ್ರಮ ಚಟುವಟಿಕೆಗಳಿಗೆ ಕಡಿವಾಣಕ್ಕೆ ಸಹಕರಿಸಿ

    ಚಿತ್ರದುರ್ಗ:ಲೋಕಸಭಾ ಚುನಾವಣೆ ಸಂದರ್ಭ ಗಡಿಭಾಗದಿಂದ ನಮ್ಮ ಜಿಲ್ಲೆಯೊಳಗೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಹಕರಿಸುವಂತೆ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆ ಅಧಿಕಾರಿಗಳಿಗೆ,ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದರು.
    ಸೋಮವಾರ ಡಿಸಿ ಕಚೇರಿಯಲ್ಲಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲಾಧಿಕಾರಿ,ಎಸ್‌ಪಿ, ಅಬಕಾರಿ ಮತ್ತಿತರ ಇಲಾಖೆ ಅಧಿಕಾರಿಗಳೊ ಂದಿಗೆ ಸೋಮವಾರ ನಡೆಸಿದ ವಿಡಿಯೋ ಸಂವಾದದ ವೇಳೆ ಮಾತನಾಡಿದ ಅವರು,ಅಕ್ರಮ ಚಟುವಟಿಕೆಗಳ ತಡೆ ನಿಟ್ಟಿನಲ್ಲಿ ಜಿಲ್ಲಾದ್ಯಂತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕುಗಳು ಆಂಧ್ರಪ್ರದೇಶದ ಗಡಿ ಪ್ರದೇಶವನ್ನು ಹಂಚಿ ಕೊಂಡಿದ್ದು,ನೆರೆಯ ರಾಜ್ಯದಿಂದ ನಮ್ಮಗೆ ಅಕ್ರಮವಾಗಿ ಮದ್ಯ,ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ, ಕೆಲವರು ಆಗಮಿಸಿ,ಚುನಾ ವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ.
    ಈ ಹಿನ್ನೆಲೆಯಲ್ಲಿ ಚಳ್ಳಕೆರೆ ತಾಲೂಕಿನ ನಾಗಪ್ಪನಹಳ್ಳಿಗೇಟ್.ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಹಾಗೂ ಪಿ.ಡಿ.ಕೋಟೆ ಕ್ರಾಸ್ ಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ,ತೀವ್ರ ನಿಗಾ ವಹಿಸಲಾಗುವುದು. ಅದೇ ರೀತಿ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ವ್ಯಾಪ್ತಿಯ ಲ್ಲೂ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ,ನಿಗಾ ವಹಿಸಬೇಕೆಂದು ವೆಂಕಟೇಶ್ ಕೋರಿದರು.
    ಶ್ರೀ ಸತ್ಯಸಾಯಿ ಜಿಲ್ಲಾಧಿಕಾರಿ ಪಿ.ಅರುಣ್‌ಬಾಬು ಅವರು ಸೂಕ್ತ ಕ್ರಮದ ಭರವಸೆ ನೀಡಿದರು. ಚಿತ್ರದುರ್ಗ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್,ಎಡಿಸಿ ಬಿ.ಟಿ.ಕುಮಾರಸ್ವಾಮಿ, ಎಸಿ ಎಂ.ಕಾರ್ತಿಕ್,ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts