More

    ಅಕ್ರಮ ಚಟುವಟಿಕೆ ನಡೆದರೆ ಸಹಿಸೋಲ್ಲ


    ಯಾದಗಿರಿ: ನನ್ನ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆ ನಡೆಸಲು ಯಾವ ಕಾರಣಕ್ಕೂ ಅವಕಾಶ ಮಾಡಿ ಕೊಡುವುದಿಲ್ಲ. ಈ ಬಗ್ಗೆ ಅಧಿಕಾರಿಗಳು ಅತ್ಯಂತ ಜಾಗೃತೆಯಿಂದ ಕೆಲಸ ಮಾಡಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸೂಚನೆ ನೀಡಿದರು.

    ಗುರುವಾರ ಗುರುಮಠಕಲ್ ತಾಲೂಕಿನ ಮಿನಾಸಪುರ ಗ್ರಾಮದಲ್ಲಿನ ಹಳ್ಳಕ್ಕೆ ಕೆಕೆಆರ್ಡಿಬಿ ವತಿಯಿಂದ 1.50 ಕೋಟಿ ರೂ.ವೆಚ್ಚದಲ್ಲಿ ನಿಮರ್ಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಲೋಕಾರ್ಪಣೆಗೊಳಿಸಿ ಮಾತನಾಡಿ, ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದೆ. ಸಹಜವಾಗಿ ಆ ಪಕ್ಷದ ನಾಯಕರು ತಮಗೆ ಬೇಕಾದ ಅಧಿಕಾರಿಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಹಾಗಂತ, ಮನಬಂದಂತೆ ಆಡಳಿತ ನಡೆಸುತ್ತಾರೆ ಎಂದರೆ ನಾನಂತೂ ಬಿಡುವುದಿಲ್ಲ. ಅಧಿಕಾರಿಗಳು ಈ ಬಗ್ಗೆ ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

    ಕಳೆದ ಚುನಾವಣೆಯಲ್ಲಿ ಈ ಭಾಗದಲ್ಲಿ ಕಂದಕೂರ ಬಿಟ್ಟರೆ, ಅತೀಹೆಚ್ಚು ಮತ ನೀಡಿದ್ದು, ಮಿನಾಸಪುರ ಜನತೆ. ಇದಕ್ಕಾಗಿ ನಾನು ನಿಮ್ಮನ್ನು ಜೀವನ ಕೊನೆಯುಸಿರು ಇರುವವರೆಗೂ ಮರೆಯುವುದಿಲ್ಲ. ಗ್ರಾಮದಲ್ಲಿನ ಹಳ್ಳಕ್ಕೆ ಬ್ಯಾರೇಜ್ ನಿಮರ್ಿಸಬೇಕು ಎಂಬುದು ಜನರ ಬಹುದಿನಗಳ ಬೇಡಿಕೆ ಇತ್ತು. ನನ್ನ ತಂದೆ ನಾಗನಗೌಡರು ಶಾಸಕರಾಗಿದ್ದ ವೇಳೆಯಲ್ಲಿ ಇದಕ್ಕೆ ಅನುದಾನ ಮೀಸಲಿಟ್ಟು ಬೇಡಿಕೆ ಈಡೇರಿಸಿದ್ದಾರೆ. ಅದರಂತೆ ಮುಂದಿನ ದಿನಗಳಲ್ಲಿ 16.50 ಲಕ್ಷ ರೂ.ವೆಚ್ಛದಲ್ಲಿ ಸುಸಜ್ಜಿತ ರಸ್ತೆ ನಿಮರ್ಿಸಲಾಗುವುದು ಎಂದು ಘೋಷಿಸಿದರು.

    ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡುತ್ತಿದ್ದೇನೆ. ಜನರು ತಮ್ಮ ಸಮಸ್ಯೆ ಇದ್ದರೆ ನೇರವಾಗಿ ಬಂದು ನನ್ನನ್ನು ಸಂಪಕರ್ಿಸಬಹುದು. ಯಾವುದೇ ತೊಂದರೆ ಇದ್ದರೂ ಅದನ್ನು ಪ್ರಾಮಾಣಿಕವಾಗಿ ಈಡೇರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts