More

    ಅಕ್ರಮ ಮರಳು ಗಣಿಗಾರಿಕೆ ತಡೆಯಿರಿ


    ಯಾದಗಿರಿ: ವಡಗೇರಾ ತಾಲೂಕಿನ ಕೃಷ್ಣಾ ನದಿ ತೀರದ ಯಕ್ಷಿಂತಿ, ಟೊಣ್ಣೂರು, ಗೌಡೂರು ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ವ್ಯಾಪಕವಾಗಿದ್ದು, ಇದನ್ನು ತಡೆಯುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರಿಗೆ ಮನವಿ ಸಲ್ಲಿಸಿದರು.

    ಕೃಷ್ಣಾ ನದಿ ಪಾತ್ರದಲ್ಲಿನ ಗ್ರಾಮಗಳಲ್ಲಿ ಕಳೆದ ಹಲವು ತಿಂಗಳಿಂದ ಅಕ್ರಮ ಮರಳು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಆದರೂ ಸಹ ಜಿಲ್ಲಾಡಳಿತ ಕಣ್ಣು ಮುಚ್ಚಿಕೊಂಡು ಕುಳಿತಿದೆ. ಇದರಲ್ಲಿ ರಾಜಕೀಯ ನಾಯಕರು, ಸಕರ್ಾರಿ ಅಧಿಕಾರಿಗಳು ಶಾಮೀಲಾಗಿರುವ ಅನುಮಾನ ಮೂಡಿಸಿದೆ. ನೈಸಗರ್ಿಕ ಸಂಪತ್ತನ್ನು ದೋಚಿ ಹೊರ ರಾಜ್ಯಗಳಿಗೆ ಸಾಗಿಸುತ್ತಿದ್ದಾರೆ. ಇದರಿಂದ ಭೂಮಿಯಲ್ಲಿನ ಅಂತರ್ಜಲ ಮಟ್ಟ ಕುಸಿಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

    ನದಿ ದಂಡೆಯಲ್ಲಿರುವ ಗ್ರಾಮಗಳಲ್ಲಿ ಅಕ್ರಮವಾಗಿ ರಸ್ತೆಗಳನ್ನು ನಿಮರ್ಿಸಿಕೊಂಡು ಹಗಲು ರಾತ್ರಿ ಮರಳು ದರೋಡೆ ನಡೆಸುತ್ತಿದ್ದಾರೆ. ಇದರಿಂದ ಸಕರ್ಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂ.ನಷ್ಟವಾಗುತ್ತಿದೆ. ಈಗಾಗಲೇ ಮಳೆಯ ಅಭಾವದಿಂದ ಮುಂಬರುವ ದಿನದಲ್ಲಿ ನೀರಿನ ಹಾಹಾಕಾರ ಹೆಚ್ಚಾಗಲಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts