More

    ಅಕ್ಷರ ಕಲಿಸಿದ ಗುರು ವೃಂದಕ್ಕೆ ನಮನ

    ಹಾವೇರಿ: ಸಮಾಜದಲ್ಲಿ ಗುರುಗಳಿಗೆ ವಿಶಿಷ್ಟ ಸ್ಥಾನವಿದೆ. ಕಲ್ಲನ್ನು ಮೂರ್ತಿಯನ್ನಾಗಿ ಮಾಡುವ ಶಿಲ್ಪಿಗಳೆಂದು ಗೌರವಿಸಲ್ಪಡುತ್ತಾರೆ. ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಂಕಲ್ಪ ಮಾಡಬೇಕು ಎಂದು ಶಿಕ್ಷಕರಿಗೆ ಶಾಸಕ ನೆಹರು ಓಲೇಕಾರ ಹೇಳಿದರು.

    ಡಾ. ಸರ್ವಪಲ್ಲಿ ರಾಧಾಕೃಷ್ಣನ್​ರವರ 134ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಗುರುಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಲ್ಪಿಯಾಗಿ, ಶಿಕ್ಷಣ ತಜ್ಞರಾಗಿ ಸೇವೆ ಸಲ್ಲಿಸಿದ ಮಹಾನುಭಾವರು. ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಲಾಗುತ್ತಿದೆ ಎಂದರು.

    ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಮುಗ್ದ ಮನಸ್ಸಿನ ಮಕ್ಕಳಿಗೆ ಅಕ್ಷರದ ಬೀಜ ಬಿತ್ತಿ, ಮಕ್ಕಳ ಬದುಕಿನಲ್ಲಿ ಬೆಳಕು ಚಲ್ಲಿ ಸುಂದರನಾಡು ಕಟ್ಟುವ ಶಿಲ್ಪಿಗಳೇ ಶಿಕ್ಷಕರು. ಉತ್ತಮ ಸಮಾಜ ನಿರ್ವಣಕ್ಕೆ ಶಿಕ್ಷಕರ ಕೊಡುಗೆ ಅಪಾರ ಎಂದರು.

    ಹಾನಗಲ್ಲ ತಾಲೂಕು ಸುರಳೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಶ್ರೀಕಾಂತ ಹುಲ್ಮನಿ ಮಾತನಾಡಿ, ಗುರು ಸ್ಥಾನ ಮಹತ್ವದ್ದಾಗಿದೆ. ಶಿಕ್ಷಕ ವೃತ್ತಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಶಿಕ್ಷಕ ವೃತ್ತಿಯ ಪಾವಿತ್ರ್ಯೆ ಕಾಪಾಡುವುದು ಶಿಕ್ಷಕರ ಮೇಲಿದೆ ಎಂದರು.

    ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಅಂಕಪಡೆದ ಜಿಲ್ಲೆಯ ವಿದ್ಯಾರ್ಥಿಗಳಾದ ಮಧು ಶೇತಸನದಿ, ಪ್ರವೀಣ ನೀರಲಗಿ ಹಾಗೂ ಸೃಷ್ಟಿ ಕಮ್ಮಾರ ಅವರನ್ನು ಸನ್ಮಾನಿಸಲಾಯಿತು. ಪ್ರಶಸ್ತಿ ಪುರಸ್ಕೃತ 21ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಾಲ್ವರು ಸ್ಕೌಟ್ಸ್ ಆಂಡ್ ಗೈಡ್ಸ್ ಶಿಕ್ಷಕರು ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.

    ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಡಿಡಿಪಿಐ ಬಿ.ಎಸ್. ಜಗದೀಶ್ವರ ಸ್ವಾಗತಿಸಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ಸಂದೇಶ ವಾಚಿಸಿದರು.

    ಡಯಟ್ ಪ್ರಾಚಾರ್ಯ ಜೆ. ಕಾರೇಕರ, ಜಿಲ್ಲಾ ಹಾಗೂ ತಾಲೂಕು ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಸ್.ಎಸ್. ಅಡಿಗ, ಎಸ್.ಜಿ. ಕೋಟಿ, ವಿಜಯೇಂದ್ರ ಯತ್ನಳ್ಳಿ, ರವಿ ಗೊಣೆಪ್ಪನವರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts