More

    ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣದಲ್ಲಿ ಕೇಂದ್ರ ವಿಫಲ

    ಚಿಕ್ಕಬಳ್ಳಾಪುರ: ನಿರಂತರವಾಗಿ ಇಂಧನ ಬೆಲೆ ಏರಿಕೆ, ವಿವಿಧ ನೀತಿಗಳ ಜಾರಿ ವಿರೋಧಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆ ನಡೆಸಿತು. ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಉಪ ವಿಭಾಗಾಧಿಕಾರಿಗಳ ಕಚೇರಿಗೆ ಬಂದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಕೂಗಿದರು.

    ಯುಪಿಎ ಸರ್ಕಾರದ ಅವಧಿಯಲ್ಲಿ ಇಂಧನ ಬೆಲೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಪಹಾಸ್ಯ ಮಾಡಿದ್ದರು. ಇದೀಗ ಅವರ ಅಧಿಕಾರವಧಿಯಲ್ಲಿಯೇ ಪ್ರತಿದಿನ ಬೆಲೆ ಹೆಚ್ಚಾಗುತ್ತಿದ್ದರೂ ಮೌನವಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಟೀಕಿಸಿದರು.

    ಕರೊನಾ ಸಂಕಷ್ಟದಲ್ಲಿ ಜನಸಾಮಾನ್ಯರಿಗೆ ಇಂಧನ ದರ ಹೆಚ್ಚಳದ ಹೊಡೆತ ಬಿದ್ದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ, ಬಡ ಮತ್ತು ಮಧ್ಯಮ ವರ್ಗದ ಅಭಿವೃದ್ಧಿಯು ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ ಎಂದು ಆರೋಪಿಸಿದರು.

    ಕರೊನಾ ಆತಂಕದ ಸಂದರ್ಭದಲ್ಲಿ ವಿಪಕ್ಷಗಳು ಸರ್ಕಾರಕ್ಕೆ ಉತ್ತಮವಾಗಿಯೇ ಸಹಕರಿಸುತ್ತಿವೆ. ಆದರೆ, ಇದನ್ನೇ ದುರುಪಯೋಗಪಡಿಸಿಕೊಂಡು ಮಾರಕ ನೀತಿಗಳನ್ನು ಜಾರಿಗೆ ತರುವ ಮೂಲಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡಿಸಲಾಗುತ್ತಿದೆ. ಪ್ರಶ್ನಿಸಿದರೆ ಕ್ಷುಲ್ಲಕ ರಾಜಕಾರಣ ಎನ್ನುತ್ತಾರೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್ ಕಿಡಿಕಾರಿದರು.

    ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಜಯರಾಂ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್, ಜಿಪಂ ಮಾಜಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ, ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ರಫೀವುಲ್ಲಾ, ಮುಖಂಡರಾದ ಕೆ.ವಿ.ನವೀನ್ ಕಿರಣ್, ಮಮತಾಮೂರ್ತಿ, ಮಂಗಳಾ ಪ್ರಕಾಶ್, ದೇವಿಶೆಟ್ಟಹಳ್ಳಿ ಗಂಗಾಧರ್ ಇತರರಿದ್ದರು.

    ಕರೊನಾ ಮರೆತ ನಾಯಕರು : ಪ್ರತಿಭಟನೆ ಸಂದರ್ಭದಲ್ಲಿ ಮುಖಂಡರು ಕರೊನಾ ಆತಂಕ ಮರೆತು ನಿಯಮಗಳನ್ನು ಉಲ್ಲಂಘಿಸಿದರು. ಪರಸ್ಪರ ಅಂತರ ಉಲ್ಲಂಘನೆ ಕಂಡು ಬಂತು. ಕೆಲವರು ಮಾಸ್ಕ್ ಧರಿಸದೇ ಭಾಗವಹಿಸಿದ್ದರು. ಇನ್ನು ಪ್ರತಿಭಟನೆಗೆ ಅವಕಾಶ ನೀಡಿದ ಜಿಲ್ಲಾಡಳಿತ, ನಿಯಮ ಉಲ್ಲಂಘನೆಯ ಬಗ್ಗೆ ಗಮನವನ್ನೇ ಹರಿಸಲಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts