More

    ಅಗತ್ಯ ವಸ್ತು ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

    ಬೆಳಗಾವಿ: ಅಗತ್ಯ ವಸ್ತುಗಳು, ತೈಲ ಉತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಕರ್ನಾಟಕ ದಲಿತ ಯುವ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಕೋವಿಡ್-19, ಲಾಕ್‌ಡೌನ್‌ನಿಂದಾಗಿ ಆದಾಯ, ಉದ್ಯೋಗ ಇಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಜನರು ಇದೀಗ ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಅಗತ್ಯ ವಸ್ತುಗಳು, ಕೃಷಿ ಉಪಕರಣಗಳು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಆರ್ಥಿಕ ಸಂಕಷ್ಟದಲ್ಲಿರುವ ರೈತರು, ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ವಾಹನ ಚಾಲಕರು, ಖಾಸಗಿ ಕಂಪನಿಗಳ ಉದ್ಯೋಗಿಗಳ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಹಾಗಾಗಿ, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ಅಲ್ಲದೆ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಸಂಪೂರ್ಣ ಕಡಿವಾಣ ಹಾಕಲು ಕ್ರಮ ವಹಿಸಬೇಕು.

    ಇಲ್ಲದಿದ್ದರೆ ಸರ್ಕಾರಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿ ಮೂಲಕ ಎಚ್ಚರಿಸಿದರು. ಮಹೇಶ ಕೋಲಕಾರ, ಬಾಳಪ್ಪ ಕಾಂಬಳೆ, ಸುನೀಲ ಬಸ್ತವಾಡಕರ, ಮಾರುತಿ ಕಾಂಬಳೆ, ವಿಠ್ಠಲ ತಳವಾರ, ಸಂತೋಷ ಕಾಂಬಳೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts