More

    ಅಗತ್ಯ ಸಿದ್ಧತೆ ಕೈಗೊಳ್ಳಿ

    ಬಳ್ಳಾರಿ : ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನಲೆ ಮಳೆ ಹಾನಿಯಿಂದಾಗಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮವಹಿಸಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲೂಕು ತಹಶೀಲ್ದಾರರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು. ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು, ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಇದಕ್ಕೆ ಸ್ಥಳೀಯ-ಸಂಸ್ಥೆಗಳು ಕೈಜೋಡಿಸಬೇಕು. ಮಳೆಯಿಂದಾಗುವ ಮನೆಹಾನಿ ಮತ್ತು ಗುಡುಗು-ಸಿಡಿಲಿನಿಂದ ಜನ-ಜಾನುವಾರು ಪ್ರಾಣಹಾನಿ ತಡೆಗಟ್ಟಲು ಜಾಗೃತಿ ಮೂಡಿಸಬೇಕು, ಅಲ್ಲದೆ ಮಳೆ, ಸಿಡಿಲಿನಿಂದ ಉಂಟಾಗುವ ಯಾವುದೇ ಹಾನಿ ವರದಿಯನ್ನು ತ್ವರಿತವಾಗಿ ಸಲ್ಲಿಸಲು ಅಧಿಕಾರಿಗಳನ್ನು ನಿಯೋಜಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ವರದಿ ನೀಡಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು. ಈ ಬಾರಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
    ಸಾರ್ವಜನಿಕರು ವಿದ್ಯುತ್ಗೆ ಸಂಬಂಧಿಸಿದಂತೆ ದೂರುಗಳಿಗೆ ಕರೆ ಮಾಡಿದಲ್ಲಿ ತಕ್ಷಣವೇ ಸ್ಪಂದಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೆ ಕ್ರಮವಹಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಹಲವು ಸಮನ್ವಯ ವಿಷಯಗಳ ಕುರಿತು ಚರ್ಚೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts