More

    ಅಚ್ಛೆ ದಿನ್‌ಗಿಂತ ಕೆಟ್ಟ ದಿನಗಳನ್ನು ಕೊಟ್ಟ ಮೋದಿ

    ಚಡಚಣ: ಈ ಬಾರಿ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೋಡಿ ನಡೆಯಲ್ಲ. ಅವರ ಮುಖ ನೋಡಿ ಮತ ಹಾಕುವ ದಿನಗಳು ಹೋದವು. ಅಚ್ಛೆ ದಿನ್ ಅಂತಾ ಹೇಳಿ ಕೆಟ್ಟ ದಿನಗಳನ್ನು ಕೊಟ್ಟವರು ಮೋದಿ ಎಂದು ಬಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

    ಬುಧವಾರ ಸ್ಥಳೀಯ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಲೋಕಸಭಾ ಅಭ್ಯರ್ಥಿ ರಾಜು ಆಲಗೂರ ಅವರ ಪ್ರಚಾರಾರ್ಥ ಹಮ್ಮಿಕೊಂಡಿದ್ದ ಚಡಚಣ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಮೋದಿ ಅವರು ಹೇಳಿರುವ ಯಾವ ಭರವಸೆಯೂ ಈಡೇರಿಲ್ಲ. ಆದರೂ ಯುವಕರು ಭ್ರಮೆಯಲ್ಲಿ ತೇಲುತ್ತ ಮೋದಿ ಮೋದಿ ಎನ್ನುತ್ತಾರೆ ಎಂದರು.

    ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಅಜಗಜಾಂತರವಾಗಿ ಏರಿಕೆ ಕಂಡಿದೆ. ಸದ್ಯ ಚುನಾವಣಾ ಬಾಂಡ್ ಹಗರಣದಿಂದ ಮೋದಿ ಅವರ ಒಳಮರ್ಮ ಹೊರಬಂದಿದೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ ಬಂಧನಕ್ಕೆ ಕಾರಣವಾಗಿರುವ ಕಂಪನಿಯಿಂದಲೇ ಬಿಜೆಪಿ ಬಾಂಡ್ ಹೆಸರಲ್ಲಿ ದುಡ್ಡು ಹೊಡೆದಿದೆ. ಕಳ್ಳತನದಿಂದ ಪಡೆಯುತ್ತಿರುವದನ್ನು ರಹದಾರಿಯಲ್ಲಿ ಪಡೆದಿದ್ದೇವೆ ಎಂತಲೂ ಇವರು ಹೇಳುತ್ತಾರೆ.

    ಚಡಚಣ ಭಾಗವು ಜೂನ್ ತಿಂಗಳ ಹೊತ್ತಿಗೆ ಸಂಪೂರ್ಣ ನೀರಿನ ಸಮಸ್ಯೆಯಿಂದ ಮುಕ್ತವಾಗಲಿದೆ. ಇದಕ್ಕೆ ನಾವು ಬದ್ಧರಾಗಿದ್ದು, ಸಧ್ಯ ಬದಲಾವಣೆ ಕಾಲವಾಗಿದ್ದು ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ದೇಶದಲ್ಲೂ ಗ್ಯಾರಂಟಿಗಳ ಪರ್ವ ಆರಂಭವಾಗಲಿದೆ ಎಂದು ಅವರು ಹೇಳಿದರು.

    ಅಭ್ಯರ್ಥಿ ಪ್ರೊ. ರಾಜು ಆಲಗೂರ, ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿದರು. ಜೆಡಿಎಸ್ ಮುಖಂಡರಾದ ಬಾಬುಗೌಡ ಪಾಟೀಲ, ರಾಜಶೇಖರ ಡೋಣಗಾಂವ, ಯುನಸಅಲಿ ಮಕಾನದಾರ, ಮುರ್ತುಜಸಾಬ ನದಾ ಹಾಗೂ ಸಿಕಂದರ ಸಾವಳಸಂಗ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಕೌಶಲ್ಯಾಭಿವದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಪ್ರಕಾಶಗೌಡ ಪಾಟೀಲ, ಆರ್.ಡಿ. ಹಕ್ಕೆ, ಸುರೇಶ ಗೊಣಸಗಿ, ಎಂ.ಆರ್. ಪಾಟೀಲ (ಬಳ್ಳೊಳ್ಳಿ), ಧಾನಮ್ಮಗೌಡತಿ ಪಾಟೀಲ, ಡಿ.ಎಲ್. ಚವ್ಹಾಣ, ಬಸವರಾಜ ಬಿರಾದಾರ, ಭೀಮನಗೌಡ ಬಿರಾದಾರ, ಶ್ರೀದೇವಿ ಉತ್ಲಾಸರ, ಮಹಾದೇವ ಹಿರೆಕುರುಬರ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts