More

     ಅಜ್ಜಂಪುರಕ್ಕೆ ಆರ್ಥಿಕ ಪ್ಯಾಕೇಜ್ ಘೊಷಿಸಿ

    ಅಜ್ಜಂಪುರ: ಅತಿವೃಷ್ಟಿಯಿಂದ ಹಾನಿಗೀಡಾದ ರೈತರಿಗೆ ಸರ್ಕಾರ ಕೂಡಲೇ ವಿಶೇಷ ಆರ್ಥಿಕ ಪ್ಯಾಕೇಜ್ ಘೊಷಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ವಿಶ್ವೇಶ್ವರ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಮುಖ್ಯ ಬೆಳೆ ಈರುಳ್ಳಿ ನೆಲಕಚ್ಚಿದೆ. ಜತೆಗೆ ಶೇಂಗಾ, ಹತ್ತಿ, ಆಲೂಗಡ್ಡೆ ಹಾನೀಗೀಡಾಗಿವೆ. ಅಡಕೆಯೂ ಕೊಳೆರೋಗಕ್ಕೆ ತುತ್ತಾಗಿದೆ. ಹಾಕಿರುವ ಬಂಡವಾಳ ಬಾರದಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಆಗ್ರಹಿಸಿದರು.

    ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮಾತನಾಡಿ, ಇದು ಸಾಂಕೇತಿಕ ಪ್ರತಿಭಟನೆ. ರೈತರಿಗೆ ಶೀಘ್ರ ಪರಿಹಾರ ನೀಡದಿದ್ದರೆ ಗ್ರಾಮ, ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಜನಜಾಗೃತಿ ಮೂಲಕ ಪಾದಯಾತ್ರೆ ನಡೆಸಲಾಗುವುದು. ಸರ್ಕಾರದ ಭ್ರಷ್ಟಾಚಾರ, ಅಕ್ರಮಗಳನ್ನು ಬಯಲಿಗೆ ಎಳೆಯಲಾಗುವುದು ಎಂದು ಎಚ್ಚರಿಸಿದರು.

    ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ರಾಜ್ಯದಲ್ಲಿ ಮಳೆಯಿಂದ ಅಂದಾಜು 65 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ. ಕೇಂದ್ರದಿಂದ ನೆರವು ಪಡೆದುಕೊಳ್ಳಲು ರಾಜ್ಯದ ನಾಯಕರಿಗೆ ಸಾಧ್ಯವಾಗಿಲ್ಲ. ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ 40 ಸಾವಿರ ರೂ. ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts