More

    ಅಡುಗೆ ಅನಿಲ ದರ ಹೆಚ್ಚಳಕ್ಕೆ ವಿರೋಧ

    ಧಾರವಾಡ: ಅಡುಗೆ ಅನಿಲ ದರ ಏರಿಕೆ ಖಂಡಿಸಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

    ಒಂದೇ ದಿನದಲ್ಲಿ ಅಡುಗೆ ಅನಿಲ ದರ ಪ್ರತಿ ಸಿಲಿಂಡರ್​ಗೆ 145.5 ರೂ. ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗಿದ್ದು, ಜೀವನ ನಿರ್ವಹಣೆ ದುಸ್ತರವಾಗಿದೆ. ಹಣದುಬ್ಬರ, ದಿನಬಳಕೆ ಸಾಮಗ್ರಿಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿಂದ ತತ್ತರಿಸಿರುವ ಜನರಿಗೆ ಅನಿಲ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದ ದಿನೇದಿನೆ ಅಡುಗೆ ಅನಿಲದ ಬೆಲೆ ಹಾಗೂ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರುತ್ತಿದೆ. ಕೂಡಲೇ ಅಡುಗೆ ಅನಿಲ ದರ ಏರಿಕೆಗೆ ಕಡಿವಾಣ ಹಾಕಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

    ಜಿ.ಪಂ. ಅಧ್ಯಕ್ಷೆ ವಿಜಯಲಕ್ಷಿ್ಮೕ ಪಾಟೀಲ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಮ್ಮ ಗುಜ್ಜಳ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ವಾತಿ ಮಾಳಗಿ, ಕವಿತಾ ದಲಬಂಜನ್, ರಜೀಯಾ ಬೇಗಂ ಸಂಗೊಳ್ಳಿ, ಸುರೇಖಾ ಮೇದಾ, ಶೋಭಾ ಮಿನಗಣವರ, ಕಲಾವತಿ ಗಿರಿಯನ್ನವರ, ವಿ.ವಿ. ಚಾಕಲಬ್ಬಿ, ಸರೋಜಾ ಪಾಟೀಲ, ಗಿರಿಜಾ ದೂಳಿಕೊಪ್ಪ, ಶೋಭಾ ಅಣ್ಣಿಗೇರಿ, ಝುರೀನಾ ಬೇಗಂ ಬಾಡ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts