More

    ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಿ


    ಯಾದಗಿರಿ: ರಾಜ್ಯದ ಸರಕಾರಿ ಪ್ರಥಮ ದಜರ್ೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ ಹಾಗು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಮಂಗಳವಾರ ನಗರದ ಸುಭಾಷ್ ವೃತ್ತದಲ್ಲಿ ಎಐಡಿಎಸ್ಓ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ., ಮಾತನಾಡಿ, ಉಪನ್ಯಾಸಕರ ಬೇಡಿಕೆಗಳ ಈಗಾಗಲೇ ಸರಕಾರದ ಗಮನದಲ್ಲಿದೆ. ರಾಜ್ಯದ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಮೂರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಕಾಲ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರಕಾರರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ ಎಂದರು.

    ಒಂದೆಡೆ ತರಗತಿಗಳು ನಡೆಯುತ್ತಿಲ್ಲ. ಮತ್ತೊಂದೆಡೆ ಸೆಮಿಸ್ಟರ್ ಪರಿಕ್ಷೆಗಳ ದಿನಾಂಕ ಸಮೀಪಿಸುತ್ತಿದೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿ ಸಾಕಷ್ಟು ಆತಂಕಕ್ಕೆ ತಳ್ಳಿದೆ. ಆದ್ದರಿಂದ ಸರಕಾರ ಕೂಡಲೇ ಈ ಕುರಿತು ಗಮನ ಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts