More

    ಅತ್ಯಾಚಾರ ಆರೋಪಿಗೆ 12 ವರ್ಷ ಶಿಕ್ಷೆ

    ಚಿತ್ರದುರ್ಗ: ಮಾತು ಬಾರದ ಹೆಂಗಸಿನ ಮೇಲೆ ಅತ್ಯಾಚಾರ, ಕೊಲೆ ಯತ್ನ ಪ್ರಕರಣ ಸಂಬಂಧದ ಆರೋಪಿಗೆ 12 ವರ್ಷ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

    ಘಟನೆ ಹಿನ್ನೆಲೆ: ಆರೋಪಿ ಎನ್.ಓ.ನಾಗೇಶ್ ಹೊಳಲ್ಕೆರೆ ತಾಲೂಕಿನ ಗ್ರಾಮವೊಂದರಲ್ಲಿ 2021ರ ಸೆಪ್ಟೆಂಬರ್ 16ರಂದು ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಾತು ಬಾರದ ಹೆಂಗಸಿನ ಮೇಲೆ ಅತ್ಯಾಚಾರವೆಸಗಿ, ಕೊಲೆಗೆ ಪ್ರಯತ್ನಿಸಿದ್ದ ಎಂದು ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.

    ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಕೆ.ಗೀತಾ ಅವರು ಆರೋಪ ಸಾಬೀತಾದ ಹಿನ್ನೆಲೆ ಮೇಲ್ಕಂಡಂತೆ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಪ್ರಧಾನ ಸರ್ಕಾರಿ ಅಭಿಯೋಜಕ ಬಿ.ಗಣೇಶ ನಾಯ್ಕ ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts