More

    ಅದ್ದೂರಿ ರಾಜ್ಯೋತ್ಸವ ಆಚರಿಸಿಯೇ ಸಿದ್ಧ

    ಬೆಳಗಾವಿ: ಎಂಇಎಸ್ ಸಂಘಟನೆ ನಿಷೇಧಿಸಬೇಕು ಹಾಗೂ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಒತ್ತಾಯಿಸಿ
    ಕರವೇ ಪ್ರವೀಣ ಶೆಟ್ಟಿ ಬಣದ ಪದಾಧಿಕಾರಿಗಳು ಬುಧವಾರ ನಗರದಲ್ಲಿ ಪ್ರತಿಭಟಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

    ಎಂಇಎಸ್ ಕಾರ್ಯಕರ್ತರು ಸೋಮವಾರ ನಡೆಸಿದ್ದ ಪ್ರತಿಭಟನೆಯಲ್ಲಿ ಜೈ ಮಹಾರಾಷ್ಟ್ರ ಎಂಬ ಘೋಷಣೆ ಕೂಗುವ ಮೂಲಕ ನಾಡದ್ರೋಹ ಎಸಗಿದ್ದಾರೆ. ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಎಂಇಎಸ್ ಕಾರ್ಯಕರ್ತರು ಪದೇ ಪದೆ ಕ್ಯಾತೆ ತೆಗೆಯುತ್ತಿದ್ದು, ಇದರಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ.

    ಈ ನಿಟ್ಟಿನಲ್ಲಿ ಎಂಇಎಸ್ ಸಂಘಟನೆ ನಿಷೇಧಿಸಬೇಕು. ಕೋವಿಡ್ ನಿಮಿತ್ತ ಎರಡು ವರ್ಷಗಳಿಂದ ರಾಜ್ಯೋತ್ಸವವು ಸಾಂಕೇತಿಕವಾಗಿ ನಡೆದಿದೆ. ದೇಶದಲ್ಲಿ ಕರೊನಾ ನಿಯಂತ್ರಣಕ್ಕೆ ಬಂದಿದೆ. ಹಾಗಾಗಿ, ಸರ್ಕಾರವು ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದರು. ಕರವೇ (ಪ್ರವೀಣ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಆರ್.ಅಭಿಲಾಷ, ಉಪಾಧ್ಯಕ್ಷ ಕೆ.ಎಸ್. ಖಡಕಣ್ಣವರ, ಜಿಲ್ಲಾ ಗೌರವಾಧ್ಯಕ್ಷ ರಾಜು ಹೊಸಮನಿ, ಶಶಾಂಕ ಲದ್ದಿಮಠ, ಮಂಜುನಾಥ ಶೆಟ್ಟರ್, ಪ್ರಕಾಶ ಚಿಪಲಕಟ್ಟಿ, ರಾಹುಲ್ ಕಲಾಲ ಇತರರಿದ್ದರು.

    ಚುನಾವಣಾ ರ‌್ಯಾಲಿಗಿಲ್ಲದ ನಿಯಮ ಕನ್ನಡ ಹಬ್ಬಕ್ಕೆ ಏಕೆ?: ಬೆಳಗಾವಿಯಲ್ಲಿ ನವೆಂಬರ್ 1ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಸರ್ಕಾರ ಈವರೆಗೂ ಯಾವುದೇ ಆದೇಶ ಹೊರಡಿಸದಿರುವುದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ.

    ಬೆಳಗಾವಿಯಲ್ಲಿ ಉಪಚುನಾವಣೆ ನಡೆಸಲು ಅಡ್ಡಿ ಬಾರದ ಕೋವಿಡ್ ನಿಯಮಾವಳಿಗಳು, ಕೇವಲ ರಾಜ್ಯೋತ್ಸವ ಆಚರಣೆ ಮಾತ್ರವೇ ಎಂಬ ಪ್ರಶ್ನೆ ಕನ್ನಡಿಗರನ್ನು ಕಾಡುತ್ತಿದೆ. ತಕ್ಷಣ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ರಾಜ್ಯೋತ್ಸವ ಆಚರಣೆಗೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಕನ್ನಡ ಸಂಘಟನೆಗಳೆಲ್ಲ ಒಂದಾಗಿ ಬೆಳಗಾವಿಯಲ್ಲಿ ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಿಸುತ್ತೇವೆ.

    ಈ ವೇಳೆ ಯಾವುದೇ ಅಹಿತಕರ ಘಟನೆ ನಡೆದರೂ ಅದಕ್ಕೆ ಜಿಲ್ಲಾಡಳಿತವೇ ಹೊಣೆಯಾಗಬೇಕಾಗುತ್ತದೆ ಎಂದು ಪದಾಧಿಕಾರಿಗಳು ಮನವಿ ಮೂಲಕ ಎಚ್ಚರಿಕೆ ನೀಡಿದರು. ಶಿವಾನಂದ ದೇವರಮನಿ, ರವಿ ಬೆಟಗೇರಿ, ಪ್ರಶಾಂತ ಧಡಿ, ಗಣೇಶ ವೈ., ಸಂದೀಪ ಅರಳಿಸೀಮೆ, ಆನಂದ ಕಟಕೋಳ ಇತರರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts