More

    ಅಧಿಕಾರಿಗಳಿಗೆ ಮುಜರಾಯಿ ಸಚಿವೆ ಜೊಲ್ಲೆ ತರಾಟೆ

    ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ, ಕಾಮಗಾರಿಗಳು ವಿಳಂಬವಾಗುತ್ತಿವೆ ಎಂದು ಅಧಿಕಾರಿಗಳನ್ನು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತರಾಟೆಗೆ ತೆಗೆದುಕೊಂಡರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕೂಡಲೇ ಸರ್ಕಾರದ ಯೋಜನೆಗಳು ಅನುಷ್ಠಾನಕ್ಕೆ ಬರಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

    ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಶಾಲೆಗಳಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ವಹಿಸಿ. ಶಾಲೆ, ಅಂಗನವಾಡಿ ಕೇಂದ್ರಗಳ ಶೌಚಗೃಹಗಳ ದುರಸ್ತಿ ಮಾಡಬೇಕು. ಈ ವಿಷಯದಲ್ಲಿ ರ್ನಿಲಕ್ಷಮಾಡುವ ಅಧಿಕಾರಿಗಳ ವಿರುದ್ಧ ಮುಲಾ ಜಿಲ್ಲದೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಚಿಕ್ಕೋಡಿ, ನಿಪ್ಪಾಣಿ ಪಟ್ಟಣದಲ್ಲಿ ನಿತ್ಯ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಜನರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಸಂಚಾರ ದಟ್ಟಣೆ
    ನಿವಾರ ಣೆಗೆ ಕ್ರಮ ವಹಿಸಬೇಕು. ಅಗತ್ಯವಿರುವ ಕಡೆಯಲ್ಲ ಸಿಗ್ನಲ್​ ಅಳವಡಿಸಿ. ಪದೇ ಪದೆ ಸಂಚಾರ ದಟ್ಟಣೆ ಸಮಸ್ಯೆ ಎದುರಾಗದಂತೆ ವಾಹನಗಳ ಸಂಚಾರ ವ್ಯವಸ್ಥೆ ಮಾಡಬೇಕು ಎಂದರು.

    ನಿಪ್ಪಾಣಿ ತಾಲೂಕಿನಲ್ಲಿ ಅನೇಕ ಕುಸ್ತಿ ಕ್ರೀಡಾಪಟುಗಳಿದ್ದು, ಕ್ರೀಡಾ ಇಲಾಖೆಯಿಂದ ಅವರಿಗೆ ಪೋತ್ಸಾಹ ದೊರೆಯಬೇಕು. ಖೇಲೋ ಇಂಡಿಯಾ ಯೋಜನೆಯ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು. ಸ್ಥಳಿಯ ಕುಸ್ತಿ ಪಟುಗಳಿಗೆ ಖೇಲೋ ಇಂಡಿಯಾ ಮೂಲಕ ಕ್ರೀಡಾ ಇಲಾಖೆಯ ವಸತಿ ನಿಲಯದಲ್ಲಿ ಪ್ರವೇಶ ಪಡೆಯಲು ಪತ್ರಿಕಾ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ತಲುಪುವಂತೆ ಮಾಡಬೇಕು ಎಂದು ಸೂಚಿಸಿದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ಕಾರ್ಮಿಕರಿಗೆ ಕಾರ್ಮಿಕ ಕಿಟ್​ ವಿತರಣೆ ಮಾಡಬೇಕು. ಅದೇ ರೀತಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾರ್ಮಿಕರಿಗೆ ಸಂಬಂಧಿಸಿದ ಯೋಜನೆಯ ಮೂಲಕ 60 ವರ್ಷ ನಂತರ ಅವರಿಗೆ ಪಿಂಚಣಿ ಬರುವಂತೆ ನೋಂದಣಿ ಮಾಡಬೇಕು ಎಂದರು. ಬಿಪಿಎಲ್​ ಕಾರ್ಡ್​ ಇರುವವರಿಗೆ ಹೆಚ್ಚಿನ ಚಿಕತ್ಸೆ ಪಡೆಯಲು ಸಹಾಯವಾಗುವಂತೆ ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಒಬ್ಬ ನೋಡಲ್​ ಅಧಿಕಾರಿಗಳನ್ನು ನೇಮಕ ಮಾಡಬೇಕು.

    ಹೆಚ್ಚಿನ ವೈದ್ಯಕಿಯ ಚಿಕಿತ್ಸೆ ಅವಶ್ಯವಿದ್ದಲ್ಲಿ, ನೋಡಲ್​ ಅಧಿಕಾರಿಗಳ ರೆಫರಲ್​ ಮೂಲಕ ಸ್ಥಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಪಿಂಚಣಿ, ವಿದ್ಯಾರ್ಥಿ ವೇತನ, ಸಾಲ ಸೌಲಭ್ಯಗಳು ಸೇರಿ ವಿವಿಧ ಇಲಾಖೆಯ ಸರ್ಕಾರದ ಎಲ್ಲ ಯೋಜನೆಗಳು ಜನರಿಗೆ ಸುಲಭವಾಗಿ ತಲುಪುವಂತೆ ನೋಡಿಕೊಳ್ಳಬೇಕು.

    ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿ ಕೊರತೆ ನೀಗಿಸಲು ತಣ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದರು. ಜಿಪಂ ಸಿಇಒ ದರ್ಶನ್​ ಎಚ್​.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ, ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts