More

    ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಲಿ

    ಆಲಮೇಲ: ಅಧಿಕಾರಿಗಳು ಕೇವಲ ಕಚೇರಿಗೆ ಸಿಮೀತವಾಗದೆ ಸಾರ್ವಜನಿಕರ ನಡುವೆ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಇಲ್ಲಿಂದ ವರ್ಗವಾಗಬೇಕು ಎಂದು ಶಾಸಕ ಅಶೋಕ ಮನಗೂಳಿ ಖಡಕ್ ವಾರ್ನಿಂಗ್ ನೀಡಿದರು.

    ಪಟ್ಟಣದ ತಹಸೀಲ್ದಾರ್ ಕಾರ್ಯಾಲಯ ಸಭಾಭವನದಲ್ಲಿ ಶುಕ್ರವಾರ ಆಲಮೇಲ ಹಾಗೂ ಸಿಂದಗಿ ತಾಲೂಕು ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಈ ಬಾರಿ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ತಾಲೂಕು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. 2020-23ರ ಎಸ್‌ಎ್ಸಿ ವಿಶೇಷ ಅನುದಾನದಡಿ ಸಿಂದಗಿ ಪಟ್ಟಣದಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ಅಂದಾಜು 50 ಲಕ್ಷ ರೂ. ಗಳನ್ನು ಮಂಜೂರು ಮಾಡಲಾಗಿದೆ. ಆದರೆ ಸಿಂದಗಿ ಪುರಸಭೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಭವನದ ಕಾಮಗಾರಿ ನನೆಗುದಿಗೆ ಬಿದ್ದಿದೆ. ಕೂಡಲೇ ಅಧಿಕಾರಿಗಳು ಶಿಕ್ಷಕರ ಭವನದ ಕಾಮಗಾರಿ ಪ್ರಾರಂಭಿಸಬೇಕು. ಆಲಮೇಲ-ಸಿಂದಗಿ ತಾಲೂಕಿನ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಗಳಲ್ಲಿ ಶೌಚಗೃಹಗಳ ಸ್ಥಿತಿ-ಗತಿಗಳ ಕುರಿತು ಮಾಹಿತಿ ನೀಡಬೇಕು ಎಂದರು.

    ಆಲಮೇಲ ತಾಲೂಕಿನ ಗಬಸಾವಳಗಿ ಗ್ರಾಮ ಪಂಚಾಯಿತಿಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಇಲ್ಲಿಯವರೆಗೆ ಯಾವುದೇ ಸಾಮಾನ್ಯ ಸಭೆಗಳು ಜರುಗುತ್ತಿಲ್ಲ. ಇದರಿಂದ ಗ್ರಾಮದ ಅಭಿವೃದ್ಧಿಗೆ ಹಿನ್ನಡೆೆಯಾಗುತ್ತಿದೆ ಎಂದು ಗ್ರಾಮಸ್ಥರ ದೂರು ನೀಡಿದ್ದು, ಕೂಡಲೇ ತಾಪಂ ಅಧಿಕಾರಿಗಳು ಆ ಗ್ರಾಪಂಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು. ಪ್ರತಿ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಡಿಒಗಳು ಸ್ಥಾನಿಕವಾಗಿ ಇರದೆ ತಾಲೂಕ ಕೇಂದ್ರಗಳಲ್ಲಿ ಕೋಣೆಗಳಲಿದ್ದುಕೊಂಡು ಮನಸ್ಸಿಗೆ ಬಂದ ಹಾಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರುಗಳು ಬಂದಿವೆ. ಇನ್ನು ಮುಂದೆ ಗ್ರಾಪಂ ಪಿಡಿಒಗಳು ಕಾರ್ಯ ನಿರ್ವಹಿಸುತ್ತಿರುವ ಗ್ರಾಪಂಗಳಲ್ಲಿ ಸ್ಥಾನಿಕವಾಗಿ ಇದ್ದು ಕಾರ್ಯ ನಿರ್ವಹಿಸಬೇಕು. ಯಾವುದೇ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.

    ಜಿಪಂ ಉಪ ನಿರ್ದೇಶಕರ ಕಚೇರಿ ಆಡಳಿತ ಅಧಿಕಾರಿ ಪುಂಡಲೀಕ ಮಾನ್ನನವರ, ಜಿಪಂ ಮುಖ್ಯ ಯೋಜನಾಧಿಕಾರಿ- ಆಡಳಿತ ಅಧಿಕಾರಿ ನಿಂಗಪ್ಪ ಗೋಟೆ, ಆಲಮೇಲ ತಹಸೀಲ್ದಾರ್ ಮಹಾದೇವ ಸನಮುರಿ, ಸಿಂದಗಿ ತಹಸೀಲ್ದಾರ್ ಪ್ರದೀಪಕುಮಾರ ಹಿರೇಮಠ, ಹೆಸ್ಕಾಂ ಎಇಇ ಚಂದ್ರಕಾಂತ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ೀ ಬಿರಾದಾರ, ಕಂದಾಯ ನಿರೀಕ್ಷಕ ಎಂ.ಎ.ಅತ್ತಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts