More

    ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ – ಜಿಲ್ಲಾಧಿಕಾರಿ ನಿತೇಶ ಪಾಟೀಲ

    ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.19ರಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಅಗತ್ಯವಿರುವ ಅಧಿಕಾರಿ, ಸಿಬ್ಬಂದಿಗೆ ಮಾತ್ರ ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆ ಕುರಿತು ವಿವಿಧ ಉಪ ಸಮಿತಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಸಚಿವರು, ವಿಧಾನಸಭೆ ಹಾಗೂ ಪರಿಷತ್​ ಸದಸ್ಯರು ಹಾಗೂ ಉನ್ನತ ಅಧಿಕಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿರುವ ಕಡೆಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಹಾಗೂ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.

    ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಸೇರಿ ಇತರರಿಗೆ ವಸತಿ, ಊಟೋಪಹಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಒದಗಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ವಸತಿ, ಊಟ, ಸಾರಿಗೆ ಸೇರಿ ಎಲ್ಲ ಉಪ ಸಮಿತಿಗಳು ಎಲ್ಲ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ವಿಧಾನ ಪರಿಷತ್​ ಕಾರ್ಯದರ್ಶಿ ಕೆ.ಆರ್​.ಮಹಾಲಕ್ಷಿ$್ಮ ಮಾತನಾಡಿ, ಸಭಾಧ್ಯಕ್ಷರು ಹಾಗೂ ಸಭಾಪತಿ ಅವರಿಗೆ ಶಿಷ್ಟಾಚಾರದ ಪ್ರಕಾರ ವಸತಿ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು. ಅದಲ್ಲದೆ ಪರಿಷತ್ತಿನ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೂಡ ವಸತಿ, ಸಾರಿಗೆ ಮತ್ತಿತರ ಸೌಲಭ್ಯ ಒದಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಪರಿಷತ್ತಿನ ವಿವಿಧ ಕೊಠಡಿಗಳಿಗೆ ನಾಮಫಲಕ ಮತ್ತಿತರ ಅಳವಡಿಕೆ ಮಾಡಬೇಕು.

    ಸೂಕ್ತ ಭದ್ರತಾ ಕ್ರಮ ಕೈಗೊಳ್ಳಬೇಕು. ಈ ವಿಷಯದಲ್ಲಿ ಅಧಿಕಾರಿಗಳು ರ್ನಿಲಕ್ಷ ಮಾಡುವುದು ಸರಿಯಲ್ಲ ಎಂದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಸ್ಮಾರ್ಟ್​ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವಿಣ ಬಾಗೇವಾಡಿ ಸೇರಿ ವಿವಿಧ ಉಪ ಸಮಿತಿಗಳ ಅಧ್ಯಕ್ಷರು, ಪರಿಷತ್​ನ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts