More

    ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆ ಚರ್ಚೆಯಾಗಲಿ


    ಚಿಕ್ಕೋಡಿ: ಪ್ರತ್ಯೇಕ ಜಿಲ್ಲೆಯನ್ನಾಗಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾಗಬೇಕು ಎಂಬ ಉದ್ದೇಶದಿಂದ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಡಿ.11ರಂದು ಚಿಕ್ಕೋಡಿ ನಗರದಲ್ಲಿ ಬೃಹತ್​ ಪ್ರತಿಭಟನೆ ಮಾಡುವ ನಿರ್ಧಾರ ಕೈಗೊಂಡಿದೆ ಎಂದು ಚರಮೂರ್ತಿಮಠದ ಸಂಪಾದನ ಸ್ವಾಮೀಜಿ ಹೇಳಿದರು.

    ಇಲ್ಲಿನ ಲೋಕೋಪಯೋಗಿ ಇಲಾಖೆ ಸಭಾಭವನದಲ್ಲಿ ಜಿಲ್ಲಾ ಹೋರಾಟ ಸಮಿತಿ ಶುಕ್ರವಾರ ಹಮ್ಮಿಕೊಂಡಿದ್ದ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಚಿಕ್ಕೋಡಿ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ 20 ವರ್ಷಗಳಿಂದ ಜಿಲ್ಲಾ ಹೋರಾಟ ಸಮಿತಿ ನಿರಂತರ ಹೋರಾಟ ಮಾಡುತ್ತಿದೆ. ಆದರೆ, ಸರ್ಕಾರ ಇದುವರೆಗೂ ಜಿಲ್ಲೆ ೂಷಣೆ ಮಾಡಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ೂಷಣೆ ಮಾಡಬೇಕು ಎಂಬ ಉದ್ದೇಶದಿಂದ ಜಿಲ್ಲಾ ಹೋರಾಟ ಸಮಿತಿ ಈ ರ್ನಿಣಯ ಕೈಗೊಂಡಿದೆ ಎಂದರು.

    ಪುರಸಭೆ ಮಾಜಿ ಉಪಾಧ್ಯ ಸಂಜಯ ಕವಟಗಿಮಠ ಮಾತನಾಡಿ, ಚಿಕ್ಕೋಡಿ ಜಿಲ್ಲೆಗಾಗಿ ಪ್ರತಿಭಟನೆ ಮೂಲಕ ಸರ್ಕಾರದ ಗಮನ ಸೆಳೆಯಲು ಜಿಲ್ಲಾ ಹೋರಾಟ ಸಮಿತಿ ಸಿದ್ಧವಾಗಿದೆ ಎಂದರು. ತಾಪಂ ಮಾಜಿ ಸದಸ್ಯ ಕಾಶಿನಾಥ ಕುರಣಿ ಮಾತನಾಡಿ, ಜನಸಾಮಾನ್ಯರ ಅಭಿವೃದ್ಧಿ ದೃಷ್ಟಿಯಿಂದ ಚಿಕ್ಕೋಡಿ ಜಿಲ್ಲೆ ೂಷಣೆ ಮಾಡಬೇಕೆಂದರು. ಉಮರಾಣಿ ಗ್ರಾಪಂ ಅಧ್ಯ ಲಕ್ಷ$್ಮಣ ಪೂಜೇರಿ, ಜಿಲ್ಲಾ ಹೋರಾಟ ಸಮಿತಿಯ ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ವಕೀಲ ಬಿ.ಎಂ.ಪಾಟೀಲ, ಪುರಸಭೆ ಸದಸ್ಯ ನಾಗರಾಜ ಮೇದಾರ ಹಾಗೂ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts