More

    ಅಧ್ಯಾತ್ಮದತ್ತ ಜನರ ಒಲವು

    ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಾಂತಳ್ಳಿ ವಲಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.


    ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಬಸವಾಪಟ್ಟಣ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಮಾತನಾಡಿ, ಅತ್ಯಂತ ತಾಂತ್ರಿಕವಾಗಿ ಮುಂದುವರಿದಿರುವ ಇಪ್ಪತ್ತೊಂದನೇ ಶತಮಾನದ ಕಾಲಘಟ್ಟದಲ್ಲಿ ಜನಸಾಮಾನ್ಯರು ಆಧ್ಯಾತ್ಮಿಕತೆ ಕಡೆಗೆ ಆಸಕ್ತಿ ತೋರುತ್ತಿರುವುದು ವಿಶೇಷ. ಇದು ಉತ್ತಮ ಸಂದೇಶ ನೀಡುತ್ತದೆ. ಮನುಷ್ಯ ಎಷ್ಟೇ ಮುಂದುವರಿದರೂ ನೆಮ್ಮದಿಗಾಗಿ ದೇವರ ಮೊರೆ ಹೋಗುತ್ತಿದ್ದಾನೆ ಎಂದು ಹೇಳಿದರು.


    ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಲೀಲಾವತಿ, ಶಾಂತಳ್ಳಿ ವಲಯದ ಅಧ್ಯಕ್ಷ ಪ್ರವೀಣ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಅಬಕಾರಿ ನಿರೀಕ್ಷಕ ಲೋಕೇಶ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಪರಮೇಶ್, ತಾಲೂಕು ಯೋಜನಾಧಿಕಾರಿ ರೋಹಿತ್, ಶಾಂತಳ್ಳಿ ವಲಯ ಮೇಲ್ವಚಾರಕಿ ಕಲಾವತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts