More

    ಅನಗತ್ಯ ರೆಮ್ಸಿಡಿವಿರ್ ಬಳಕೆ ಬೇಡ

    ಗದಗ: ಕರೊನಾ ಸೋಂಕಿತರಿಗೆ ಅಗತ್ಯವಿದ್ದಲ್ಲಿ ಆಕ್ಸಿಜನ್ ಹಾಗೂ ರೆಮ್ೆಸಿವಿರ್ ಚುಚ್ಚುಮದ್ದನ್ನು ಮಿತವಾಗಿ ಬಳಕೆ ಮಾಡಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸುಂದರೇಶಬಾಬು ಹೇಳಿದರು.

    ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕೋವಿಡ್ ನಿಯಂತ್ರಣ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಸಿಬ್ಬಂದಿ ಸೇರಿದಂತೆ ಪೌರ ಕಾರ್ವಿುಕರೆಲ್ಲರೂ ಸುರಕ್ಷತಾ ಕ್ರಮ ಪಾಲಿಸಬೇಕು. ಅವರಿಗೆ ಸುರಕ್ಷತಾ ಸಾಮಗ್ರಿಯನ್ನು ಇಲಾಖೆಗಳಿಂದ ಸರಬರಾಜು ಮಾಡಬೇಕು ಎಂದರು. ಲಕ್ಷಣರಹಿತ ಸೋಂಕಿತರಿಗೆ ಮನೆಯಲ್ಲಿಯೇ ಅಗತ್ಯ ಔಷಧ ನೀಡಿ ನಿಯಮಿತವಾಗಿ ನಿಗಾ ವಹಿಸಬೇಕು ಎಂದರು. ಆಕ್ಸಿಜನ್ ಅಗತ್ಯವಿದ್ದಲ್ಲಿ ತಾಲೂಕು ಆಸ್ಪತ್ರೆಗೆ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಸೋಂಕಿತರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಬೇಕು. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ನಿಗಾ ವಹಿಸಬೇಕು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಲ್ಲಿ ವರದಿ ನೀಡಲು ನೇಮಿಸಲಾದ ಸಮಿತಿಯು ತಕ್ಷಣ ಜಿಲ್ಲಾಡಳಿತಕ್ಕೆ ಪರಿಶೀಲಿಸಿ ವರದಿ ನೀಡಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬ ಆಗಬಾರದು. ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಕ್ರಮಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ನಿಗಾ ವಹಿಸಬೇಕು. ಅಲ್ಲದೆ, ಸೋಂಕಿತರಿಗೆ ನೀಡಿದ ಚಿಕಿತ್ಸೆಯ ವೆಚ್ಚದ ಬಗ್ಗೆಯೂ ಸಹ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಾಗ ಪರಿಶೀಲಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಎಚ್​ಒ ಡಾ. ಸತೀಶ ಬಸರೀಗಿಡದ, ಡಾ. ಬಿ.ಎಂ. ಗೊಜನೂರ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರರು, ತಾಪಂ ಇಒಗಳು, ತಾಲೂಕು ವೈದ್ಯಾಧಿಕಾರಿಗಳು ಮತ್ತಿತರರು ಇದ್ದರು.

    ಜಿಲ್ಲೆಯಲ್ಲಿ 248 ಜನರಿಗೆ ಸೋಂಕು

    ಗದಗ: ಶುಕ್ರವಾರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದ್ವಿಶತಕ ಬಾರಿಸಿದ್ದು, ಬರೋಬ್ಬರಿ 248 ಜನರಲ್ಲಿ ವೈರಸ್ ಪತ್ತೆಯಾಗಿದೆ. ಸೋಂಕು ತಗುಲಿದೆ. ಗದಗದಲ್ಲಿ 151, ಮುಂಡರಗಿ 19, ನರಗುಂದ 8, ರೋಣ 40, ಶಿರಹಟ್ಟಿ 17, ಹೊರಜಿಲ್ಲೆಯ ಪ್ರಕರಣಗಳು 13 ಜನರಿಗೆ ಸೋಂಕು ತಗುಲಿದೆ. ಕರೊನಾ ಸೋಂಕಿನಿಂದ ಶುಕ್ರವಾರ ಮತ್ತೆ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 153 ಕ್ಕೆ ಏರಿದಂತಾಗಿದೆ. 2ನೇ ಅಲೆ ಆರಂಭವಾದ ನಂತರ ಕೇವಲ ಐದು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 12 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts