More

    ಅನಗತ್ಯ ಸಂಚಾರ ತಡೆಗೆ ನೂತನ ಕ್ರಮ

    ಹುಕ್ಕೇರಿ: ತಾಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಮುಂದಾದ ತಾಲೂಕು ಆಡಳಿತ ಅನಗತ್ಯ ಸಂಚರಿಸುವವರನ್ನು ತಡೆದು, ಅವರ ಗಂಟಲು ದ್ರವದ ಮಾದರಿ ಪರೀಕ್ಷಿಸುವ ಕ್ರಮಕ್ಕೆ ಮುಂದಾಗಿದೆ.

    ಪಟ್ಟಣದ ಕೋರ್ಟ್ ವೃತ್ತದ ಬಳಿ ತಹಸೀಲ್ದಾರ್, ಸಿಪಿಐ ಮತ್ತು ತಾಲೂಕು ವೈದ್ಯಾಧಿಕಾರಿಗಳ ನೇತೃತ್ವದ ತಂಡ ಶುಕ್ರವಾರ ಅನಗತ್ಯವಾಗಿ ಸಂಚರಿಸುವ ದ್ವಿಚಕ್ರ ವಾಹನ ಸವಾರರನ್ನು ತಡೆದು, ಅವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಿತು. ಜತೆಗೆ ಬೈಕ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿತು.

    ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ ಮಾತನಾಡಿ, ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಆ ನಂತರವೂ ಕೆಲವರು ನೆಪ ಹೇಳಿ ರಸ್ತೆಗಿಳಿಯುತ್ತಿದ್ದಾರೆ. ಅಂತಹವರ ನಿಯಂತ್ರಣಕ್ಕಾಗಿ ತಾಲೂಕಾಧಿಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

    ಸಿಪಿಐ ರಮೇಶ ಛಾಯಾಗೋಳ, ತಾಲೂಕು ವೈದ್ಯಾಧಿಕಾರಿ ಉದಯ ಕುಡಚಿ ಮಾತನಾಡಿದರು. ಪಿಎಸ್‌ಐ ಸಿದ್ರಾಮಪ್ಪ ಉನ್ನದ, ಎಎಸ್‌ಐಗಳಾದ ಕೆ.ಎನ್.ಪಿಂಜಾರ, ಎಸ್.ಎಸ್.ಉಪ್ಪಾರ, ಕಂದಾಯ ಇಲಾಖೆ ಅಧಿಕಾರಿ ಪ್ರವೀಣ ಮಾಳಾಜ, ಗ್ರಾಮ ಲೆಕ್ಕಾಧಿಕಾರಿ ಶಾನೂಲ್ ಮುಲ್ತಾನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts