More

    ಅನಧಿಕೃತ ಕಟ್ಟಡಗಳ ತೆರವು

    ಬೆಳಗಾವಿ: ಇಲ್ಲಿನ ರಾಮತೀರ್ಥ ನಗರದಲ್ಲಿ ಕೋಟ್ಯಂತರ ರೂ. ಬೆಲೆ ಬಾಳುವ ನಾಗರಿಕ ಸೌಲಭ್ಯ ನಿವೇಶನಗಳಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ಮಂಗಳವಾರ ಜೆಸಿಬಿ ಬಳಸಿ ತೆರವುಗೊಳಿಸುವ ಮೂಲಕ ಒತ್ತುವರಿ ಮಾಡಕೊಂಡವರಿಗೆ ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರಿ (ಬುಡಾ) ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬುಡಾ ವತಿಯಿಂದ ರಾಮತೀರ್ಥ ನಗರ ಬಡಾ ವಣೆ ನಿರ್ಮಾಣ ಸಂದರ್ಭದಲ್ಲಿ ನಾಗರಿಕ ಸೌಲಭ್ಯ ನಿವೇಶನಗಳನ್ನು ಮೀಸಲಿಡಲಾಗಿತ್ತು. ಅದರಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರು. ಈ ಕುರಿತು ಕಟ್ಟಡ ತೆರವು ಮಾಡಿಕೊಳ್ಳುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಅನಧಿಕೃತ ಕಟ್ಟಡಗಳ ಮಾಲೀಕರು ಸ್ಪಂದಿಸಲಿಲ್ಲ. ಹಾಗಾಗಿ, ಎಲ್ಲ ಕಟ್ಟಡ ಗಳನ್ನು ತೆರವುಗೊಳಿಸಲಾಗಿದೆ. ಅನಧಿಕೃತ ಕಟ್ಟಡ ನಿರ್ಮಿಸಿಕೊಂಡಿ ದ್ದರಿಂದ ತೆರವುಗೊಳಿಸಲಾಗಿದೆ ಎಂದು ಬುಡಾ ಅಧಿಕಾರಿ ಗಳು ತಿಳಿಸಿದ್ದಾರೆ.
    ಆಸ್ತಿಗಳಿಗೆ ದಾಖಲೆ ಸೃಷ್ಟಿ: ಮಹಾನಗರ ಪಾಲಿಕೆಯ 58 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಆಸ್ಪತ್ರೆ, ಸಮುದಾಯ ಭವನ, ಉದ್ಯಾನ ಸೇರಿ ಸಾರ್ವಜನಿಕ ಉದ್ದೇಶಕ್ಕಾಗಿ ನಿವೇಶನ ಮೀಸಲಿಡಲಾಗಿತ್ತು. ಆದರೆ, 1990 ರಿಂದ 2020ರ ಅವಧಿಯಲ್ಲಿ ನಾಗರಿಕ ಸೌಲಭ್ಯ ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಖಾಸಗಿ ಸ್ವತ್ತುಗಳನ್ನಾಗಿ ಮಾಡಿಕೊಂಡು ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆ ಅಂತಹ ಕಟ್ಟಡಗಳ ದಾಖಲಾತಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts