More

    ಅನುದಾನ ಲಭ್ಯವಾದರೆ ಕಾಮಗಾರಿ ಪೂರ್ಣ

    ಚನ್ನರಾಯಪಟ್ಟಣ: ಎರಡು ವರ್ಷ ಕರೊನಾ ಬಂದ ಹಿನ್ನೆಲೆಯಲ್ಲಿ ಸಮುದಾಯ ಭವನ ನಿರ್ಮಾಣದ 15 ಸಾವಿರ ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರವು ಹಿಂಪಡೆದುಕೊಂಡಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

    ತಾಲೂಕಿನ ಮಾದಲಗೆರೆ ಗ್ರಾಮದಲ್ಲಿ ಮೈದುಂಬಿ ಹರಿಯುತ್ತಿರುವ ಕೆರೆಗೆ ಭಾನುವಾರ ಗಂಗೆಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ಮಾತನಾಡಿದರು. ಈ ವರ್ಷ ಅನುದಾನ ಲಭ್ಯವಾದರೆ ಬಹುತೇಕ ಸಮುದಾಯ ಭವನಗಳ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದರು.

    ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಂ.ಕೆ.ಚಿಕ್ಕೇನಹಳ್ಳಿ, ನಿಂಬೇಹಳ್ಳಿ, ತೋಟಿ ಹಾಗೂ ಹಿರೀಸಾವೆ ರಸ್ತೆಯ ಅಭಿವೃದ್ಧಿಗೆ ಹಣ ಮಂಜೂರಾಗಿದ್ದು, ಮಳೆಗಾಲ ಮುಗಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

    ಕಳೆದ ಬಾರಿ ಹಾಗೂ ಈ ವರ್ಷ ವ್ಯಾಪಕವಾಗಿ ಮಳೆ ಸುರಿದು ಕೆರೆ-ಕಟ್ಟೆಗಳು ತುಂಬಿರುವುದರಿಂದ ಕೆರೆಗಳ ಮುಂಭಾಗದ ಅಚ್ಚುಕಟ್ಟು ಪ್ರದೇಶಗಳು ಶೀತಪೀಡಿತಗೊಂಡು ಯಾವುದೇ ಬೆಳೆ ಬೆಳೆಯಲು ಯೋಗ್ಯವಾಗಿಲ್ಲ. ಸರ್ಕಾರ ಅಧ್ಯಯನ ನಡೆಸಿ ಅಧಿಕಾರಿಗಳಿಂದ ವರದಿ ಪಡೆದು ಫಲಾನುಭವಿಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಯೋಜನೆ ರೂಪಿಸಬೇಕು ಎಂದು ಮನವಿ ಮಾಡಿದರು.

    ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಜಿ.ರಾಮಕೃಷ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಂ.ಆರ್.ವಾಸು, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಸಿ.ದೊರೆಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ದಿನೇಶ್, ಮಾಜಿ ಸದಸ್ಯ ತೋಟಿ ನಾಗಣ್ಣ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ತೋಟಿ ಜಯರಾಂ, ಜಿನ್ನೇನಹಳ್ಳಿ ಗ್ರಾಪಂ ಅಧ್ಯಕ್ಷ ಎಚ್.ಎಸ್.ನಾಗರಾಜ್, ಜೆಡಿಎಸ್ ಮುಖಂಡ ದಿಲೀಪ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts