More

    ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಿ

    ಚಿಂಚೋಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರವು ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ 2019-20ರಲ್ಲಿ ಅನುಷ್ಠಾನಗೊಳಿಸಿರುವ ಕಾಮಗಾರಿ, ಯೋಜನೆಗಳು ಸಮರ್ಪಕವಾಗಿ ಜಾರಿಗೊಳಿಸಿ ಪೂರ್ಣ ಮಾಡಬೇಕು ಎಂದು ತಹಸೀಲ್ದಾರ್ ಅರುಣಕುಮಾರ ಕುಲಕರ್ಣಿ ತಾಕೀತು ಮಾಡಿದರು.
    ಪಟ್ಟಣದ ತಹಸಿಲ್ ಕಚೇರಿಯಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆ ಕುರಿತು ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇಲಾಖಾವಾರು ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸಿ. ಪ್ರತಿ ತಿಂಗಳಿಗೊಮ್ಮೆ ಪ್ರಗತಿ ವರದಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಪ್ರತಿ ಇಲಾಖೆಯ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯೊಂದಿಗೆ ಎಸ್ಸಿಪಿ, ಟಿಎಸ್ಪಿ ಅನುದಾನಗಳ ಅನುಷ್ಠಾನದ ಕುರಿತು ಚರ್ಚಿಸಿ, ಅರ್ಹರಿಗೆ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
    ತಾಪಂ ಇಒ ಅನೀಲಕುಮಾರ ರಾಠೋಡ್ ಮಾತನಾಡಿ, 2020-21ರಲ್ಲಿ ಕೆಲವು ಇಲಾಖೆಗೆ ಅನುದಾನ ಬಿಡುಗಡೆಗೊಂಡಿದ್ದು, ಕ್ರಿಯಾ ಯೋಜನೆ ರೂಪಿಸಿ ಕೆಲಸಗಳು ಪ್ರಾರಂಭಿಸಬೇಕು. ಇನ್ನೂ ಕೆಲವು ಇಲಾಖೆಗಳಿಗೆ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ, ಅನುದಾನ ಬರುತ್ತಿದ್ದಂತೆ ಕೆಲಸಗಳು ಆರಂಭವಾಗಲಿವೆ ಎಂದು ತಿಳಿಸಿದರು. ಸಮಾಜ ಕಲ್ಯಾಣಧಿಕಾರಿ ಪ್ರಭುಲಿಂಗ, ಪುರಸಭೆ ಮುಖ್ಯಾಧಿಕಾರಿ ಅಭಯಕುಮಾರ, ಜಿಪಂ ಉಪ ವಿಭಾಗ ಅಭಿಯಂತರ ಮಹ್ಮದ್ ಹುಸೇನ್, ತೋಟಗಾರಿಕೆ ಅಧಿಕಾರಿ ಅಜಿಮೋದ್ದಿನ್, ಲೋಕೋಪಯೋಗಿ ಅಭಿಯಂತರ ಗುರುರಾಜ ಜೋಶಿ, ಅರಣ್ಯ ಅಧಿಕಾರಿ ಸಿದ್ದರೂಢ, ಪ್ರಮುಖರಾದ ಸಾಯಿರೆಡ್ಡಿ ನಾಯಿನೂರ್, ರಾಜಕುಮಾರ ಇದ್ದರು.

    ತಾಲೂಕಿನಲ್ಲಿ ಮಳೆ ಹಾಗೂ ನದಿಯ ಪ್ರವಾಹದಿಂದ 41 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 8 ಕೋಟಿಗೂ ಅಧಿಕ ಸಾರ್ವಜನಿಕರ ಆಸ್ತಿ ಹಾಳಾಗಿದೆ. ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಸರ್ಕಾರದ ಸುತ್ತೋಲೆ ಪಾಲಿಸಿ ಪರಿಹಾರ ಧನ ನೀಡಲಾಗುವುದು.
    | ಅರುಣಕುಮಾರ ಕುಲಕರ್ಣಿ , ತಹಸೀಲ್ದಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts