ವಿಜಯವಾಣಿ ಸುದ್ದಿಜಾಲ ಮುಳಬಾಗಿಲು
ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹಣ ಅಂತ್ಯೋದಯ ಕಾರ್ಡ್ ದಾರರು ಹಾಗೂ ಬಿಪಿಎಲ್ ಕಾರ್ಡ್ ದಾರ ಫಲಾನುಭವಿಗಳ ಬ್ಯಾಂಕ್ ಖಾತೆಯ ಕಟ್ಟ ಕಡೆಯ ವ್ಯಕ್ತಿಗೂ ತಲುಪಲಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಸೂಚಿಸಿದರು.
ಮುಳಬಾಗಿಲು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ನೀಡಲಾಗುತ್ತಿದ್ದು, ಎಲ್ಲಾ ಬಡವರು, ಮಾಧ್ಯಮ ವರ್ಗದವರು, ಕುಟುಂಬಗಳ ಖಾತೆಗೆ ಹಣ ತಲುಪಬೇಕು. ಇನ್ನೂ ಖಾತೆಗೆ ಹಣ ಹೋಗದೆ ಇರುವಂತಹ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸಿ ತಿಂಗಳ ಅಂತ್ಯದೊಳಗೆ ವರದಿಯನ್ನು ಸಲ್ಲಿಸಬೇಕೆಂದು ಆಹಾರ ಇಲಾಖೆಯ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಎಲ್ಲಾ ಅಕ್ಕಿ ಉಗ್ರಾಣಗಳಿಗೂ ತಿಂಗಳಿಗೆ ಎರಡು ಬಾರಿ ಭೇಟಿ ನೀಡಿ, ಅಕ್ಕಿ ಏನಾದರೂ ಉಳಿಕೆ ಇದೆಯೇ ಹಾಗೂ ಅಕ್ಕಿ ಗುಣ ಮಟ್ಟವನ್ನು ಸೂಕ್ತವಾಗಿ ಪರಿಶೀಲಿಸಬೇಕು, ಆರೋಗ್ಯ ಸಮಸ್ಯೆಯಲ್ಲಿ ಸಿಲುಕಿರುವವರ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಬೇಕು ಎಂದು ಒತ್ತಾಯ ಮಾಡುತ್ತಿರುವವರ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿಯನ್ನು ತಿಳಿದುಕೊಂಡರು.
ಆಹಾರ ನಾಗರಿಕ ಸರಬರಾಜು ಇಲಾಖೆಗೆ ಸಂಬAಧಪಟ್ಟ ಅಧಿಕಾರಿಯೊಬ್ಬರು ಮಾತನಾಡಿ ಜಿಲ್ಲೆಯಲ್ಲಿ ಬಹುತೇಕ ಜನರು ಅಕ್ಕಿಯೇ ಬೇಕು ಹಣ ಬೇಡ ಎಂದು ಹೇಳುತ್ತಿದ್ದಾರೆ ಎಂದು ಸಚಿವರಿಗೆ ಮನವಿ ಮಾಡಿದರು.
ತೂಕ ಮತ್ತು ಕಾನೂನು ಮಾಪನ ಇಲಾಖೆ ಸಂಬAಧಪಟ್ಟ ಅಧಿಕಾರಿ ಜೊತೆ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಹಾಗೂ ಗ್ರಾಹಕ ಕೇಂದ್ರಗಳಲ್ಲಿ ಸರಿಯಾದ ರೀತಿ ತೂಕ ಅಳತೆ ಮಾಡುತ್ತಿದ್ದಾರೆಯೇ ಎಂಬುದನ್ನು ಮಾಹಿತಿ ಪಡೆದು ಶೀಘ್ರವಾಗಿ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು.
ಶಿಕ್ಷಣ ಇಲಾಖೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ, ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ ಹಾಗೂ ಸರ್ಕಾರಿ ಶಾಲೆಗೆ ಸೇರುವ ಮಕ್ಕಳ ಪ್ರಮಾಣ ಕಡಿಮೆಯಾಗುತ್ತಿದೆಯೇ ಎಂಬುದನ್ನು ಅದರ ಬಗ್ಗೆ ವಿವರಗಳನ್ನು ಪಡೆದುಕೊಂಡರು.
ಮುಳಬಾಗಿಲು ಶಾಸಕರಾದ ಸಮೃದ್ದಿ ಮಂಜುನಾಥ, ತಾಲ್ಲೂಕು ದಂಢಾಧಿಕಾರಿ ರೇಖಾ, ಇಓ ಸರ್ವೇಶ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್.ನಟರಾಜ್, ಮುಖಂಡರಾದ ರಾಮಪ್ರಸಾದ್, ಊರಬಾಗಿಲು ಶ್ರೀನಿವಾಸ, ರಾಮಲಿಂಗಾರೆಡ್ಡಿ ಮುಂತಾದವರಿದ್ದರು.
ಚಿತ್ರ ೨೦ ಕೆ.ಎಲ್.ಆರ್. ೦೪ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ತಹಸೀಲ್ದಾರ್ ರೇಖಾ, ಇ.ಓ.ಸರ್ವೇಶ್ ಇದ್ದರು.